ಇಂಪಾಲ,ಸೆ.೨೮:ಇಬ್ಬರ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ನಡೆಯುತ್ತಿರುವ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ. ರೊಚ್ಷಿಗೆದ್ದ ಪ್ರತಿಭಟನಾಕಾರರು ಜಿಲ್ಲಾಧಿಕಾರಗಳ ಕಚೇರಿಯನ್ನು ಧ್ವಂಸಗೊಳಿಸಿ ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ. ಇದರಿಂದಾಗಿ ಪರಿಸ್ಥಿತಿ ಉದ್ರಿಕ್ತಗೊಂಡಿದೆ.
ಜುಲೈ ತಿಂಗಳಲ್ಲಿ ಕಣ್ಮರೆಯಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದ್ದ ಚಿತ್ರಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೆ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿತ್ತು.ತಡರಾತ್ರಿ ಪ್ರತಿಭಟನಾಕಾರರ ಗುಂಪು ಉರಿಪೋಕ್ ತೇರಾ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳೊಂದಿಗೆ ಸಂಘರ್ಷಕ್ಕಿಳಿದಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪರಿಸ್ಥಿತಿ ಹತೋಟಿಗೆ ಭದ್ರತಾ ಪಡೆಗಳು ಆರ್ಶ್ವುವಾಯು ಪ್ರಯೋಗಿಸಿದ್ದರು.ಯಾವುದೇ ಕಾರಣಕ್ಕೂ ಭದ್ರತಾ ಪಡೆಗಳು ವಸತಿ ಪ್ರದೇಶಗಳಿಗೆ ಬರುವುದನ್ನು ತಡೆಯಲು ಟೈರ್‌ಗಳಿಗೆ ಬೆಂಕಿ ಹಚ್ಚಿ, ಬಂಡೆಗಳನ್ನು ರಸ್ತೆಗುರುಳಿಸಿ, ಕಬ್ಬಿಣದ ಪೈಪ್‌ಗಳನ್ನು ರಸ್ತೆಗೆ ಅಡ್ಡಲಾಗಿ ಹಾಕಿದ್ದರು ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಸಿಆರ್‌ಪಿಎಫ್‌ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಖಿ ಮತ್ತು ಮೈತೇಹಿ ಸಮುದಾಯದ ನಡುವೆ ಕಳೆದ ಹಲವು ತಿಂಗಳುಗಳಿಂದ ಹಿಂಸಾಚಾರ ನಡೆದಿತ್ತು. ಈಗ ಯುವಕರ ಶವ ಪತ್ತೆಯಾದ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.ಮಂಗಳವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇದುವರೆಗೂ ೬೫ ಮಂದಿ ಗಾಯಗೊಂಡಿದ್ದಾರೆ. ಗಲಭೆ ಹಿಂಸಾರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಇಂಪಾಲ್ ಪೂರ್ವ ಮತ್ತು ಪಶ್ಚಿಮ ಭಾಗದಲ್ಲಿ ಕರ್ಫ್ಯೂ ಹೇರಲಾಗಿದೆ.
ಮತ್ತೊಂದೆಡೆ ತೌಬಲ್ ಜಿಲ್ಲೆಯ ಖೋಂಝ್ಯಾವ್‌ನಲ್ಲಿರುವ ಬಿಜೆಪಿ ಕಚೇರಿಗೆ ಉದ್ವಿಗ್ನ ಗುಂಪು ಬೆಂಕಿ ಹಚ್ಚಿದೆ. ವಾಹನಗಳನ್ನು ಸುಟ್ಟು ಹಾಕಿದೆ. ಅಷ್ಟೇ ಅಲ್ಲ ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಪ್ರತಿಭಟನಾಕಾರರು ಪರಾರಿಯಾಗಿದ್ದಾರೆ.