ಇಟಗಾ (ಕೆ): ಅಪರಿಚಿತ ವ್ಯಕ್ತಿ ಶವ ಪತ್ತೆ:ಕೊಲೆ ಶಂಕೆ

ಕಲಬುರಗಿ,ಜೂ.30-ಫರಹತಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಇಟಗಾ (ಕೆ) ಗ್ರಾಮದ ಸೇತುವೆಯ ಮುಳ್ಳಿನ ಪೊದೆಯಲ್ಲಿ 40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕೊಲೆ ಮಾಡಿ ಸಾಕ್ಷಿನಾಶ ಪಡಿಸುವ ಉದ್ದೇಶದಿಂದ ಶವವನ್ನು ಇಲ್ಲಿ ತಂದು ಎಸೆದಿರಬಹುದು ಎಂದು ಶಂಕಿಸಲಾಗಿದೆ. ಫರಹತಾಬಾದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.