ಇಟ್ ರೈಟ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ

ಬಳ್ಳಾರಿ,ಡಿ.19: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿನ್ನೆ ಇಟ್ ರೈಟ್ ಇಂಡಿಯಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಚಾಲನೆ ನೀಡಿದರು.ಸುರಕ್ಷಿತವಾದ ಆಹಾರವನ್ನು ಗ್ರಾಹಕರಿಗೆ ತಲುಪಿಸುವಂತೆ ಆಹಾರ ತಯಾರಕರು ಮತ್ತು ಮಾರಾಟಗಾರರಿಗೆ ಸೂಚಿಸಿ ಎಂದರು.
ಇಟ್ ರೈಟ್ ಇಂಡಿಯಾ ಕಾರ್ಯಕ್ರಮದ ಧೈಯೋದ್ಧೇಶಗಳು ಹಾಗೂ ಉಲ್ಲಂಘಿಸಲ್ಲಿ ವಿಧಿಸಲಾದ ದಂಡಗಳು ಕುರಿತು ವ್ಯಾಪಕ ಪ್ರಚಾರ ನಡೆಸುವಂತೆ ಅವರು ಸೂಚಿಸಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ.ರುದ್ರಗೌಡ ಪಾಟೀಲ್ ಮತ್ತು ಆಹಾರ ಸುರಕ್ಷತಾಧಿಕಾರಿಗಳಾದ ನಂದಾಕಡಿ ಅವರು ಇಟ್ ರೈಟ್ ಇಂಡಿಯಾ ಯೋಜನೆಯ ರೂಪುರೇಷೆಗಳ ಬಗ್ಗೆ ವಿವರಿಸಿದರು.
ವಿಮ್ಸ್ ನಿರ್ದೇಶಕ ಡಾ.ದೇವಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ್, ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಹೋಟಲ್ ಮಾಲೀಕರು ಇದ್ದರು.