
ಮುಂಬೈ, ಮೇ.೨೨- ಐಎಲ್‌ಎಫ್‌ಎಸ್ ಹಣ ಲೇವಾದೇವಿ ಹಗರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ನಾಯಕ ಜಯಂತ್ ಪಾಟೀಲ್ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಐಎಲ್‌ಎಫ್‌ಎಸ್ ಹಗರಣಕ್ಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಅವರಿಗೆ ಸಮನ್ಸ್ ನೀಡಿತ್ತು. ಹೀಗಾಗಿ ಅವರು ವಿಚಾರಣೆಗೆ ಒಳಪಟ್ಟಿದ್ದಾರೆ.
ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾಗುವ ಮುನ್ನ ಮಾತನಾಡಿದ ಜಯಂತ್ ಪಾಟೀಲ್, ಜಾರಿ ನಿರ್ದೇಶನಾಲಯ ಸಮನ್ಸ್ ಬಂದಾಗಿನಿಂದ,ಪಕ್ಷದ ಪದಾಧಿಕಾರಿಗಳು ಮತ್ತು ರಾಜ್ಯದ ಇತರ ಸ್ನೇಹಿ ಪಕ್ಷಗಳಿಂದ ನನಗೆ ಕರೆಗಳು ಬರುತ್ತಿವೆ ಮತ್ತು ಜನರು ಅದನ್ನು ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾರೆ.
ರಾಜ್ಯಾದ್ಯಂತ ಪ್ರತಿಭಟನೆ:
ಎನ್ ಸಿಪಿ ನಾಯಕ ಜಯಂತ್ ಪಾಟೀಲ್ ಅವರಿಗೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿರುವ ಕ್ರಮವನ್ನು ವಿರೋದಿಸಿ ಎನ್‌ಸಿಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
ಪಾಟೀಲ್ ಅವರನ್ನು ಬೆಂಬಲಿಸಿ ಫ್ಲೆಕ್ಸ್ ಬ್ಯಾನರ್ ಹಿಡಿದು ಘೋಷಣೆಗಳನ್ನು ಕೂಗಿದರು.ಈ ವಿಷಯ ತಿಳಿದ ಜಯಂತ್ ಪಾಟೀಲ್ ಅವರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಮುಂಬೈಗೆ ಬರದಂತೆ ಮನವಿ ಮಾಡಿದ್ದಾರೆ.
ಹಣಕಾಸು ಅಕ್ರಮಗಳ ಆರೋಪದ ಮೇಲೆ ಮನಿ ಲಾಂಡರಿಂಗ್ ತನಿಖೆಯನ್ನು ೨೦೧೯ ರಿಂದ ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡಿದೆ. ಫೆಡರಲ್ ಏಜೆನ್ಸಿಯು ದೆಹಲಿ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗ ಎಫ್‌ಐಆರ್ ದಾಖಲಿಸಿತ್ತು.