ಇತಿಹಾಸದಲ್ಲೇ ಅಪರೂಪದ ಬಜೆಟ್ : ಮೋಘಾ

ಕಾಳಗಿ.ಜು.9. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ 2023 – 24 ನೇ ಸಾಲಿನ ಆಯವಯ್ಯ ಇತಿಹಾಸದಲೇ ಅತ್ಯಪರೂಪವಾದದ್ದು ಎಂದು ಕಾಳಗಿ- ಕೊಡ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ದಿನೇಶ್ ಮೋಘಾ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್ ನಲ್ಲಿ ಪ್ರತಿಬಿಂಬಿತವಾಗಿದೆ. ಪ್ರಾದೇಶಿಕವಾಗಿ ನೋಡಿದರು ಇಲಾಖಾವಾರು ನೋಡಿದರೂ ಎಲ್ಲ ದೃಷ್ಟಿಯಿಂದಲೂ ಬಜೆಟ್ ಅತ್ಯಂತ ಸಮತೋಲಿತವಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ನೀಡಿದ ಎಲ್ಲಾ ಗ್ಯಾರಂಟಿ ಯೋಜನೆಗಳ ಜಾರಿಗೆ ಅತ್ಯಂತ ವ್ಯವಸ್ಥಿತವಾಗಿ, ಯಾವುದೇ ವರ್ಗದವರಿಗೆ ಹೊರೆಯಾಗದ ರೀತಿಯಲ್ಲಿ ಹಣ ಹೊಂದಿಸಲಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎನ್ನುವುದನ್ನು ಜನ ಸಾಮಾನ್ಯರಲ್ಲಿ ಮೂಡಿಸಲು ಯಶಸ್ವಿಯಾಗಿದ್ದಾರೆ. ಮುಂದಿನ 5 ವರ್ಷದಲ್ಲಿ ರಾಜ್ಯ ಅತ್ಯಂತ ವೇಗವಾಗಿ ಸಮೃದ್ಧಿವಾಗಿ ಬೆಳವಣಿಗೆ ಸಾಧಿಸಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14 ನೇ ಬಾರಿಗೆ ಮಂಡಿಸಿರುವ ಬಜೆಟ್ ಮಹಿಳೆಯರು,ದಲಿತರು, ರೈತರು,ಅಲ್ಪಸಂಖ್ಯಾತರು, ಬಹುಸಂಖ್ಯಾತರ ಮತ್ತು ಉದ್ಯಮಿದಾರರು ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಒಳತಿನ ಬಗ್ಗೆ ಗಮನಹರಿಸಿರುವ ಜನಪರ ಇದಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಅನುಧಾನ ತರುವಲ್ಲಿ ಪ್ರಿಯಾಂಕಾ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.