ಇದ್ದೂ ಇಲ್ಲದಂತಾದ ಶುದ್ಧ ಕುಡಿವ ನೀರಿನ ಘಟಕ

ಕಾಳಗಿ.ಆ.30 : ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು. ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಶುದ್ಧ ಕುಡಿಯುವ ಘಟಕ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ನಿರ್ಮಿಸಿದೆ.

ಆದರೆ ಪಟ್ಟಣದ ರಾಮನಗರ (ವಾರ್ಡ್ 8 ರಲ್ಲಿ ) ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ಹತ್ತು ಹದಿನೈದು ದಿನಗಳಾದರೂ ದುರಸ್ತಿಗೊಳಿಸಿಲ್ಲ. ಶುದ್ಧ ನೀರಿನ ಘಟಕ ಕೆಟ್ಟಿರುವ ಬಗ್ಗೆ ಪಟ್ಟಣ ಪಂಚಾಯತಗೆ ದೂರು ನೀಡಿದರೂ ಯಾವುದೇ ಆಸಕ್ತಿ ತೋರುತ್ತಿಲ್ಲ. ಲಕ್ಷಾಂತರ ರೂ. ವೆಚ್ಚಮಾಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯ ಹಿರಿಯರು ಆರೋಪಿಸಿದ್ದಾರೆ.


ಪಟ್ಟಣದ ವಾರ್ಡ್ 8 ರಲ್ಲಿ ಶುದ್ಧ ನೀರಿನ ಘಟಕ ಕಾರ್ಯನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿ, ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕ ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

ಪರಮೇಶ್ವರ ಕಟ್ಟಿಮನಿ

ಜೈ ಕನ್ನಡಿಗರ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ


ವಾರ್ಡ್ 8 ರಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರುಪಯುಕ್ತ ಬಗ್ಗೆ ಮಾಹಿತಿ ಬಂದಿದೆ. ದುರಸ್ತಿ ಬಗ್ಗೆ ಕ್ರಮವಹಿಸಲಾಗುವುದು. ಕೂಡಲೇ ಸಮಸ್ಯೆ ಬಗೆಹರಿಸಿ ಶೀಘ್ರದಲ್ಲಿ ಜನರಿಗೆ ಶುದ್ಧ ನೀರು ಪೂರೈಸಲು ಕ್ರಮವಹಿಸಲಾಗುವುದು.

ವೆಂಕಟೇಶ ತೇಲಾಂಗ

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ