ಇದ್ರಿಸ್ ಪಾಷಾ ಸಾವಿನ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ದಿವಾಕರ್ ಒತ್ತಾಯ

ಕಲಬುರಗಿ.ಏ.5: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ರಾತ್ರಿ ಜಾನುವಾರು ಸಾಗಿಸುತ್ತಿದ್ದ ಇದ್ರೀಸ್ ಪಾμÁ ಎಂಬುವವರು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದರ ಕುರಿತು ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ( ಕಮ್ಯುನಿಸ್ಟ್) ಜಿಲ್ಲಾ ಸಮಿತಿಯು ತೀವ್ರ ಆಘಾತವನ್ನು ವ್ಯಕ್ತಪಡಿಸುತ್ತದೆ ಹಾಗೂ ಸಾವಿನ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಕೈಗೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಎಸ್‍ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಎಚ್.ವಿ. ದಿವಾಕರ್ ಅವರು ಒತ್ತಾಯಿಸಿದ್ದಾರೆ.
ಇದ್ರೀಸ್ ಪಾμÁ ಅವರ ಸಂಬಂಧಿಕರು ನೀಡಿರುವ ದೂರಿನಲ್ಲಿ ಇದ್ರೀಸ್ ಪಾμÁ ಅವರು ಜಾನುವಾರುಗಳನ್ನು ಸಂತೆಯಲ್ಲಿ ಖರೀದಿಸಿ ರಸೀದಿ ಸಮೇತ ಒಯ್ಯುತ್ತಿದ್ದರು, ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಎಂಬುವರು ಅವರನ್ನು ಅಡ್ಡಗಟ್ಟಿ 2 ಲಕ್ಷ ರೂ.ಗಳ ಬೇಡಿಕೆ ಇಟ್ಟು ಹಾಗೂ ನಂತರ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಪುನೀತ್ ಅವರ ವಿರುದ್ಧ ಸಾತನೂರು ಠಾಣೆಯಲ್ಲಿ ಹಲವಾರು ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಇದ್ರೀಸ್ ಪಾಷಾ ಅವರ ಅಸಹಜ ಸಾವು ಹಾಗೂ ಇಡೀ ಪ್ರಕರಣದ ಕುರಿತು ರಾಜ್ಯ ಸರ್ಕಾರವು ಶೀಘ್ರ ಹಾಗೂ ನಿಷ್ಟಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಿದ ಅವರು, ಯಾವುದೇ ವ್ಯಕ್ತಿಯು ಕಾನೂನನ್ನು ಉಲ್ಲಂಘಿಸಿದಲ್ಲಿ ರಾಜ್ಯಾಂಗವು ಆತನ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕೇ ವಿನಃ ಮತ್ತೆ ಇನ್ಯಾವುದೇ ವ್ಯಕ್ತಿಯು ಸ್ವಯಂಪ್ರೇರಿತವಾಗಿ ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ಇತ್ಯಾದಿಗಳನ್ನು ನಡೆಸುವುದು ಖಂಡನೀಯ ಎಂದು ತಿಳಿಸಿದ್ದಾರೆ.
ಸದರಿ ಪ್ರಕರಣದಲ್ಲಿ ದೂರು ದಾಖಲಾಗಿ 4 ದಿನಗಳು ಕಳೆದರೂ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಇನ್ನೂ ಬಂಧಿತರಾಗಿಲ್ಲ. ಈ ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಿ ಅವರ ಅಪರಾಧ ಸಾಬೀತಾದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿಸಬೇಕು ಹಾಗೂ ಇದ್ರೀಸ್ ಪಾμÁ ಕುಟುಂಬಕ್ಕೆ ಆರ್ಥಿಕ ನೆರವು, ಸಾಂತ್ವನ ಹಾಗೂ ಭದ್ರತೆಯನ್ನು ಸರ್ಕಾರವು ಕಲ್ಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.