ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಕಿಸಾನ ಕಾರ್ಡ್ ವಿತರಿಸುವಂತೆ ಬ್ಯಾಂಕ್‍ಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ.ಜು.30:ಜಿಲ್ಲೆಯ ಎಲ್ಲಾ ರೈತರಿಗೆ ಬೇಗ ಕಿಸಾನ ಕಾರ್ಡ್ ವಿತರಿಸಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ್.ವಿ ಗುರುಕರ್ ಅವರು ಬ್ಯಾಂಕರ್‍ಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಹೊಸ ಸಭಾಂಗಣದಲ್ಲಿ ಶನಿವಾರ ನಡೆದ ಲೀಡ್ ಬ್ಯಾಂಕ್ ಯೋಜನೆಗಳ ಜಿಲ್ಲಾ ಮಟ್ಟದ ಪರಮಾರ್ಶೆ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಕಲಬುರಗಿ ಜಿಲ್ಲೆ ಎರಡನೇ ಸ್ಥಾನದಲ್ಲಿ ಇದೆ. ಆದಷ್ಟು ಬೇಗ ಒಂದನೇ ಸ್ಥಾನಕ್ಕೆ ಬರುವ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು.
ಸಣ್ಣ ಕೈಗಾರಿಕೆಗಳು, ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ರೈತರು, ಆಟೋ ಚಾಲಕರು ಇತ್ಯಾದಿ ವರ್ಗದವರಿಗೆ ಸಿಬಿಲ್ ಸ್ಕೋರ್ ಮಾನದಂಡ ಮಾಡದೆ, ಅವರನ್ನು ಪದೇ ಪದೆ ಬ್ಯಾಂಕಗಳಿಗೆ ಅಲೆದಾಡಿಸದೆ ಸಾಲ ನೀಡಿ ಎಂದು ಅವರು ತಿಳಿಸಿದರು. ಬ್ಯಾಂಕಿಗೆ ಸಂಭಂದಿದಂತೆ ಬಾಕಿ ಉಳಿದ ಕೆಲಸಗಳನ್ನು ಆದಷ್ಟು ಬೇಗ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.
ಸಂಸದ ಡಾ. ಉಮೇಶ ಜಾಧವ ಮಾತನಾಡಿ, ಸರ್ಕಾರದ ಅನೇಕ ಯೋಜನೆಗÀಳು ಜನರನ್ನು ಸಹಾಯ ಮಾಡಲು ಇವೆ. ಅವುಗಳನ್ನು ಸಾಮಾನ್ಯ ವರ್ಗದವರಿಗೆ ಗೊತ್ತಿಲ್ಲ, ಅಂತಹ ಯೋಜನೆಗಳನ್ನು ಜನರಿಗೆ ತಲುಪಿಸಲು ರಸ್ತೆಗಳಲ್ಲಿ ಸ್ಟಾಲ್ ಹಾಕಿಕೊಂಡು, ಪ್ರಚಾರ ಮಾಡಬೇಕು. ಬಡವರು ಹಾಗೂ ಮಾಧ್ಯಮ ವರ್ಗದವರನ್ನು ಬ್ಯಾಂಕಗಳಿಗೆ ಸುತ್ತಾಡಿಸದೆ ಬೇಗ ಸಾಲ ನೀಡಬೇಕು ಎಂದು ಸೂಚಿಸಿದರು.
ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಸದಾಶಿವ ವೀ.ರಾತ್ರಿಕರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 1 ಲಕ್ಷ 60 ರೈತರಿಗೆ ಸಾಲ ನೀಡಿದ್ದೇವೆ. ಇನ್ನು 40 ಸಾವಿರ ರೈತರಿಗೆ ಸಾಲ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. 2,50,452 ಮಂದಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್‍ನ ವಿತರಣೆಯಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಹೆಮ್ಮೆಯಿಂದ ನುಡಿದರು.
ಈ ಸಂದÀರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್. ರಾಠೋಡ್, ನರ್ಬಾಡ್ ಡಿ.ಡಿ.ಎಮ್ ರಮೇಶ ಭಟ್, ಕೃಷ್ಣಾ ಗ್ರಾಮೀಣ ಬ್ಯಾಂಕ್‍ನ ಎ.ಜಿ.ಎಮ್ ಗುರುರಾಜ ಎಸ್, ಇತರೆ ಬ್ಯಾಂಕಿನ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.