ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಖಂಡ್ರೆ


ಹುಬ್ಬಳ್ಳಿ, ಜ 11: ರಾಜ್ಯದಲ್ಲಿನ ಉಪಚುನಾವಣೆಗಳಿಗೆ ಸಂಬಂಧಿದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಇನ್ನೆರಡು ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.
ನಗರದಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಅಭಿವೃದ್ಧಿ ಹಾಗೂ ಸ್ಥಿರ ಸರ್ಕಾರ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ ಎಂದರು.
ಬೆಳಗಾವಿ ವಿಭಾಗೀಯ ಮಟ್ಟದ ಸಮಾವೇಶವನ್ನು ಇಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದು, ಈ ಸಮಾವೇಶದಲ್ಲಿ ಉತ್ತರ ಕರ್ನಾಟಕದಿಂದ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಪಕ್ಷವನ್ನು ಬುನಾದಿಯಿಂದ ಸಂಘಟನೆ ಮಾಡಬೇಕಿದೆ. ಆದ್ದರಿಂದ ಪಕ್ಷದ ಕಾರ್ಯಕರ್ತರನ್ನು ಕ್ರಿಯಾಶೀಲರನ್ನಾಗಿಸಲು, ಹಾಗೂ ಪಕ್ಷ ಬಲವರ್ಧನೆಗೆ ಅವರು ನಿರಂತರ ಶ್ರಮಿಸುವಂತಾಗಬೇಕು ಎಂದು ಖಂಡ್ರೆ ತಿಳಿಸಿದರು.