ಇಬ್ಬನಿ ತಬ್ಬಿದ ಇಳೆಯಲಿ ಬ್ಯಾಚುಲರ್ ಪಾರ್ಟಿ

“ಇಬ್ಬನಿ ತಬ್ಬಿದ ಇಳೆಯಲಿ” ಜೊತೆ ಜೊತೆಗೆ “ಬ್ಯಾಚುಲರ್ ಪಾರ್ಟಿ” ಕೊಡಲು ಒಂದೇ ಗೂಡಿನ ಎರಡು ತಂಡಗಳು ಮುಂದಾಗಿವೆ. ಚಂದ್ರಜಿತ್ ಬೆಳ್ಳಿಯಪ್ಪ “ಇಬ್ಬನಿ ತಬ್ಬಿದ ಇಳೆಯಲಿ” ಹಾಗೂ ಅಭಿಜಿತ್ ಮಹೇಶ್ “ಬ್ಯಾಚುಲರ್ ಪಾರ್ಟಿ” ಮೂಲಕ ಒಂದಷ್ಟು ಮನರಂಜನೆ ನೀಡಲು ಮುಂದಾಗಿದ್ದಾರೆ.

“ಇಬ್ಬನಿ ತಬ್ಬಿದ ಇಳೆಯಲಿ” ಒಳ್ಳೆಯ ರೊಮ್ಯಾನ್ಸ್ ಡ್ರಾಮ ಎಂದು ಮಾತಿಗಿಳಿದ ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ, ಚಿತ್ರ ನೋಡಿದ ಮಂದಿ ಕೆಲವು ವರ್ಷಗಳವರೆಗೂ  ನೆನಪಿನಲ್ಲಿಟ್ಟಿಕೊಳ್ಳಬೇಕು ಅಂತ ಸಿನಿಮಾ ಮಾಡಲು ಪ್ರಯತ್ನ ಮಾಡುತ್ತೇನೆ. ರಾತ್ರಿ ಮಲಗಿದ್ದಾಗ ಒಂದು ಒಳ್ಳೆಯ ಕನಸು ಬೀಳುತ್ತದೆ. ಆ ಕನಸಿನಿಂದ ಬೆಳಗ್ಗೆ ಎದ್ದ ಕೂಡಲೇ ಒಂದು ತರಹ ಉತ್ಸಾಹವಿರುತ್ತದೆ. ಆ ರೀತಿ ನಮ್ಮ ಚಿತ್ರದ ಕಥೆ ಸಾಗುತ್ತದೆ ಎನ್ನುವ ವಿವರ ನೀಡಿದರು.

ನಾಯಕಿ ಅಂಕಿತಾ ಅಮರ್ ಮತ್ತು ನಾಯಕ ವಿಹಾನ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು “ಬ್ಯಾಚುಲರ್ ಪಾರ್ಟಿ” ಹಾಸ್ಯ ಪ್ರಧಾನ ಚಿತ್ರ. ದಿಗಂತ್, ರಿಷಬ್ ಶೆಟ್ಟಿ, ಅಚ್ಯುತಕುಮಾರ್, ಸಿರಿರವಿಕುಮಾರ್ ಮುಂತಾದವರು ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದರು ನಿರ್ದೇಶಕ ಅಭಿಜಿತ್ ಮಹೇಶ್.ನಟ ದಿಗಂತ್, ನಿರ್ದೇಶಕರು ಮಾಡಿಕೊಂಡ ಕಥೆ ಚೆನ್ನಾಗಿದೆ. ಎಲ್ಲರನ್ನು ನಕ್ಕು ನಗಿಸುವ ಕಾಮಿಡಿ ಜಾನರ್ ಚಿತ್ರ ಎಂದರು.  ರಿಷಬ್ ಶೆಟ್ಟಿ ಒಳ್ಳೆಯ ಚಿತ್ರವಾಗಲಿದೆ ಎಂದರು, ಸಿರಿ ರವಿಕುಮಾರ್ ಹಾಗೂ ಜಯಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿದ್ದರು.