ಇಬ್ಬರು ಕೋವಿಡ್ ಸೋಂಕಿತರ ಸಾವು

ವಿಜಯಪುರ ಏ. 19: ಜಿಲ್ಲೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಮೃತ ಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.

ಕೋವಿಡ್ ಸೋಂಕಿತ 40 ವರ್ಷ ವಯೋಮಾನದ (ಮಹಿಳೆ ) ರೋಗಿ ಸಂಖ್ಯೆ 1022788 ಅವರು ಮೃತಪಟ್ಟಿದ್ದಾರೆ.ಅವರು ಐಎಲ್‍ಐ ಹಾಗೂ ತೀವ್ರ ಶ್ವಾಸಕೋಶ ತೊಂದರೆಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

 ಅದರಂತೆ 52 ವರ್ಷದ ಪುರುಷ ರೋಗಿ ಸಂಖ್ಯೆ 1035837, ಮೃತ ಪಟ್ಟಿದ್ದು,ಇವರು ಐಎಲ್‍ಐ,ಕೆಮ್ಮು, ಜ್ವರಗಳಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇವರು ಮೃತಪಟ್ಟಿದ್ದಾರೆ.  ಈ ಇವರಿಬ್ಬರ  ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.