ಇಬ್ಬರು ಡ್ರಗ್ ಪೆಡ್ಲರ್‌ಗಳ ಸೆರೆ ೧೦ ಲಕ್ಷ ರೂ. ಮಾಲು ವಶ

ಬೆಂಗಳೂರು,ಏ.೩-ಮಾದಕ ವಸ್ತುಗಳ ಸಾಗಾಣೆ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ೧೦ ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಜಯನಗರದ ೭ನೇ ಬ್ಲಾಕ್ ನ ಜೇಡನ್ ಸೌದ್(೨೨)ಬಿಎಸ್ ಕೆ ಎರಡನೇ ಹಂತದ ನಾಗರಾಜ್? ರಾವ್?(೨೩) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ೧೦ ಲಕ್ಷ ರೂ. ಮೌಲ್ಯದ ೧೦೦ ಎಲ್‌ಎಸ್‌ಡಿ ಪೇಪರ್, ೧೦೦ ಎಕ್ಸಟೇಸಿ ಮಾತ್ರೆಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಆರೋಪಿಗಳು ಅನೂಜ್ ಮತ್ತು ಹರ್ಷವರ್ಧನ್ ಎಂಬುವವರಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿ ಮಾಡುತ್ತಿದ್ದ ಆರೋಪಿಗಳು ಸಾಫ್ಟ್‌ವೇರ್ ಇಂಜಿನಿಯರ್ ಗಳು, ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದರು ಎಂದರು.
ಬನಶಂಕರಿ ಬಳಿ ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಹೆಚ್ಚಿನ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.