ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ವಿಜಯಪುರ,ಜು.13-ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಇಬ್ಬರು ಹೆಣ್ಣು ಮಕ್ಕಳನನ್ನು ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಿಂದಗಿ ತಾಲೂಕಿನ ಹಂದಿನಗೂರು ಗ್ರಾಮದಲ್ಲಿ ನಡೆದಿದೆ.
ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ (32) ಮಕ್ಳಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಅವ್ವಮ್ಮಾ ಕಳೆದ ಆರು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳೆಂದು ತಿಳಿದುಬಂದಿದೆ.
ಪತಿ ಶ್ರೀಶೈಲ ಕುರಿ ಕಾಯಲು ಹೋಗಿದ್ದ ಹಾಗೂ ಇಬ್ಬರು ಹೆಣ್ಣು ಮಕ್ಕಳು ಶಾಲೆಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.
ಒಟ್ಟು ನಾಲ್ವರು ಹೆಣ್ಣು ಮಕ್ಕಳ ತಾಯಿಯಾಗಿದ್ದ ಅವ್ವಮ್ಮಾ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ದೇವರಹಿಪ್ಪರಗಿ ಪೆÇಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರು ಶವಗಳನ್ನು ಬಾವಿಯಿಂದ ಮೇಲೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ರವಾನಿಸಲಾಗಿದೆ.
ದೇವರಹಿಪ್ಪರಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.