ಇಬ್ಬರು ವಿದ್ಯಾರ್ಥಿಗಳು ಡಿಬಾರ್

ಕಲಬುರಗಿ,ನ.15-ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ನ.9 ರಿಂದ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಲಪತಿ ಪ್ರೊ.ದಯಾನಂದ ಅಗಸರ ಅವರು ಸೋಮವಾರ ಹುಮನಾಬಾದನ ಪರೀಕ್ಷಾ ಕೇಂದ್ರಗಳಿಗೆ ಅಪರಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಮನಾಬಾದನ ಸರ್ವೋದಯ ಪದವಿ ಮಹಾವಿದ್ಯಾಲಯದಲ್ಲಿ 6ನೇ ಸೆಮಿಸ್ಟರ್‍ನ ಸಮಾಜಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ್ದಾರೆ.