ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ: ಖಾಶೆಂಪುರ್

ಬೀದರ್ ಮೇ.29: ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ನೇಮಕಗೊಂಡ ಜಿಲ್ಲೆಯ ಶಾಸಕರಾದ ಈಶ್ವರ ಖಂಡ್ರೆರವರು ಹಾಗೂ ರಹಿಂಖಾನ್ ರವರು ಸೇರಿದಂತೆ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು ಶುಭ ಹಾರೈಸಿದ್ದಾರೆ.
ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ಜಿಲ್ಲೆಯ ಶಾಸಕರಾದ ಈಶ್ವರ ಖಂಡ್ರೆ ಹಾಗೂ ರಹಿಂಖಾನ್ ರವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆ ತಿಳಿಸಿದ ಅವರು, ಈ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ, ಇವರಿಂದ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ, ಕಾರ್ಯಗಳು ಆಗಲಿ ಎಂದು ಶುಭ ಕೋರಿದ್ದಾರೆ.
“ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೀದರ್ ಜಿಲ್ಲೆಯ ಶಾಸಕರಾದ ಸನ್ಮಾನ್ಯ ಶ್ರೀ ಈಶ್ವರ್ ಖಂಡ್ರೆರವರು ಹಾಗೂ ಸನ್ಮಾನ್ಯ ಶ್ರೀ ರಹಿಂಖಾನ್ ರವರಿಗೆ ಅಭಿನಂದನೆಗಳು. ಈ ಇಬ್ಬರು ಸಚಿವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿ.”
“ಇವರಿಂದ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ, ಕಾರ್ಯಗಳು ಆಗಲಿ. ಈ ಸರ್ಕಾರದಲ್ಲಿ ಬೀದರ್ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಿದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರಕ್ಕೆ ಮತ್ತು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಿಲ್ಲೆಯ ಇಬ್ಬರೂ ಶಾಸಕರಿಗೆ ಶುಭವಾಗಲಿ ಎಂದು ಶುಭ ಹಾರೈಸುತ್ತೇನೆ. ಅಭಿನಂದನೆಗಳು.” ಎಂದು ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್ ರವರು ಫೇಸ್‍ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಬರೆದುಕೊಂಡಿದ್ದಾರೆ.