ಇಬ್ಬರು ಹೆಣ್ಣು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ

ರೇವಾ(ಮಧ್ಯಪ್ರದೇಶ),ಮೇ.೪- ಮಾನಸಿಕ ಖಿನ್ನತೆಗೊಳಗಾಗಿದ್ದ ತಾಯಿಯೊಬ್ಬಳು ಇಬ್ಬರು ಹೆಣ್ಣು ಮಕ್ಕಳ ಕೊಲೆ ಮಾಡಿ ತಾನೂ
ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಸೋಹಗಿ ಪೊಲೀಸ್? ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಯಿಯೊಬ್ಬಳು ಇಬ್ಬರು ಹೆಣ್ಣು ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಇದಾದ ಬಳಿಕ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾಳೆ.
ಸ್ಥಳೀಯರು ನೀಡಿರುವ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದು ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆ ಯಾವಾಗಲೂ ದೇವರ ಪೂಜೆ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಮಹಿಳೆಯು ಬೆಳಿಗ್ಗೆ ಬಹಳ ಹೊತ್ತು ಕಳೆದರೂ ಮನೆಯಿಂದ ಹೊರಬಾರದ ಕಾರಣ ಪಕ್ಕದ ಮನೆಯವರಿಗೆ ಅನುಮಾನ ಮೂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಲುಪಿದ ಪೊಲೀಸರು ಮನೆಯೊಳಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.