ಇಳಿಮುಖದ ಹಾದಿಯಲ್ಲಿ ಕೊರೊನಾ


ನವದೆಹಲಿ ನವಂಬರ್ ೨. ದೇಶಾದ್ಯಂತ ಕೊರೋನಾ ಮಹಾಮಾರಿಯ ಉಪಟಳ ಸ್ವಲ್ಪ ಮಟ್ಟಿಗೆ ಇಳಿಮುಖ ಹಾದಿಯಲ್ಲಿ ಮುಂದುವರೆದಿದ್ದು ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೫ ಸಾವಿರಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ ೮೨ ಲಕ್ಷ ದಾಟಿರುವುದು ಜನರ ಮನದಾಳದಲ್ಲಿ ಮೂಡಿರುವ ಭಯ ಭೀತಿ ಕಡಿಮೆಯಾಗಿಲ್ಲ.
ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ನೀಡಿರುವ ಮಾಹಿತಿ ಪ್ರಕಾರ ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೫ ಸಾವಿರದ ೨೩೧ ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ದಾಖಲಾಗಿರುವ ಸೋಂಕಿತರ ಸಂಖ್ಯೆ ೮೨ ಲಕ್ಷದ ೨೯ ಸಾವಿರದ ೩೧೩ ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ ೪೯೬ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೂ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಒಂದು ಲಕ್ಷದ ೨೦ ಸಾವಿರಕ್ಕೂ ಹೆಚ್ಚಾಗಿದೆ. ದೇಶದಲ್ಲಿ ಸಕ್ರಿಯ ಕಾರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು ಪ್ರಸ್ತುತ ೫ ಲಕ್ಷದ ೬೧ ಸಾವಿರದ ೯೦೮ ಪ್ರಕರಣಗಳು ದಾಖಲಾಗಿವೆ. ಸಂಬಂಧಪಟ್ಟ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಇನ್ನೊಂದೆಡೆ ಚೇತರಿಸಿಕೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಯು ಹೆಚ್ಚಾಗುತ್ತಿದ್ದು ಪ್ರಸ್ತುತ ದೇಶದಲ್ಲಿ ೭೫ ಲಕ್ಷ ೪೪ ಸಾವಿರದ ೭೯೮ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗಳಿಗೆ ತೆರಳಿದ್ದಾರೆ .
ದೇಶದಲ್ಲಿ ನಿನ್ನೆ ೪೬ ಸಾವಿರ ೯೬೩ ಸೋಂಕು ಪ್ರಕರಣಗಳು ದಾಖಲಾಗಿದ್ದರೆ ಇಂದು ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಹೆಚ್ಚುಕಡಿಮೆ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಇದು ಶೇಕಡ ೩.೬ ರಷ್ಟು ಕಡಿಮೆಯಾಗಿದೆ.
ದೇಶದಲ್ಲಿ ಜನವರಿಯಲ್ಲಿ ಸಾಂಕ್ರಾಮಿಕ ರೋಗದ ಸೋಂಕು ಪ್ರಕರಣ ಮೊದಲಬಾರಿಗೆ ಪತ್ತೆಯಾಗಿತ್ತು. ಅಲ್ಲಿಂದೀಚೆಗೆ ಇದುವರೆಗೂ ೮೨ ಲಕ್ಷದ ೨೯ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ಸಮುದಾಯಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ನಡುವೆ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗುವ ವಿಚಾರ ಬೆಳಕಿಗೆ ಬಂದಿದೆ ಉಳಿದಂತೆ ಮಹಾರಾಷ್ಟ್ರ ಕೇರಳ ಪಶ್ಚಿಮ ಬಂಗಾಳ ಪ್ರಕರಣಗಳುದಿನೇ ದಿನೇ ಹೆಚ್ಚಾಗುತ್ತಿರುವುದು ದಾಖಲೆಗಳಿಂದ ತಿಳಿದುಬಂದಿದೆ.
ತೆಲಂಗಾಣದಲ್ಲಿ ಮಹಾಮಾರಿ ಉಪಟಳ ಹೆಚ್ಚಾಗಿದ್ದು ಕಳೆದ ೨೪ ಗಂಟೆಗಳ ಅವಧಿಯಲ್ಲಿ ೯೨೨ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಈ ಅವಧಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಈ ರಾಜ್ಯದಲ್ಲಿ ಇದುವರೆಗೂ ೨ ಲಕ್ಷದ ೪೦ ಸಾವಿರದ ೯೭೦ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಇರುವರೆಗೂ ಮಹಾಮಾರಿ ಸೋಂಕಿಗೆ ೧,೩೪೮ ದುರ್ದೈವಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಜಾರ್ಖಂಡ್ ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಅತಿಸಣ್ಣ ರಾಜ್ಯದಲ್ಲಿ ಇದುವರೆಗೂ ಒಂದು ಲಕ್ಷದ ೨ ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿವೆ. ನಿನ್ನೆ ಒಂದೇ ದಿನ ೩೨೬ ಮಂದಿಯಲ್ಲಿ ಸೋಂಕಿರುವುದ ಖಚಿತವಾಗಿದೆ.