ಇವಿ ಚಾರ್ಜಿಂಗ್ ಸುಲಭ ಸಾಧ್ಯಕ್ಕೆ ಡೌನ್ ಲೋಡ್ ಮಾಡಿಕೊಳ್ಳಿ ಇವಿ ಮಿತ್ರ ಆ್ಯಪ್

ಪೆಟ್ರೋಲ್, ಡಿಸೇಲ್ ದರ ದುಬಾರಿಯಾಗುತ್ತಿರುವ ಈ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಹಸಿರು ಇಂಧನ ಬಳಕೆಯ ಕುರಿತು ರಾಜ್ಯ ಸರ್ಕಾರ  ಹಾಗೂ ಬೆಸ್ಕಾಂ ಇಲಾಖೆ ಸಾಕಷ್ಟು ಶ್ರಮಿಸುತ್ತ ಬಂದಿದೆ. ಈ ಕುರಿತು ಸಾರ್ವಜನಿಕರಿಗೆ ಮತ್ತಷ್ಟು ಅರಿವು ಮೂಡಿಸಲು ಹಾಗೂ ಇವಿ ಚಾರ್ಜಿಂಗ್ ಕುರಿತಂತೆ ಸಾರ್ವಜನಿಕರಿಗೆ ಇರುವ ಗೊಂದಲಗಳನ್ನು ಪರಿಹರಿಸಲು  ‘ಇವಿ ಮಿತ್ರ ಆ್ಯಪ್’ ಅನ್ನು ಬಿಡುಗಡೆ ಮಾಡಿದೆ. ಇವಿ ಮಿತ್ರ ಆ್ಯಪ್” ಮೂಲಕ ಬೆಸ್ಕಾಂ ಸಾರ್ವಜನಿಕರಿಗೆ ಇವಿ ಚಾರ್ಜಿಂಗ್ ಸ್ಟೇಷನ್ ಗಳ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುತ್ತದೆ. ಸಾರ್ವಜನಿಕರು ಇವಿ ಮಿತ್ರ ಆ್ಯಪ್ ಡೌನ್ಲೋಡ್ ಮಾಡಿಕೊಂಡರೆ ಇವಿ ಚಾರ್ಜಿಂಗ್ ಸ್ಟೇಷನ್ ಗಳ ಕುರಿತಾದ ಸಂಪೂರ್ಣ ಮಾಹಿತಿ ಈ ಆ್ಯಪ್ ನಲ್ಲಿ ಲಭ್ಯವಿದೆ. ಇವಿ ಚಾರ್ಜಿಂಗ್ ಸ್ಟೇಷನ್ ಗಳು ಇರುವ ಸ್ಥಳ, ದರ ಪಟ್ಟಿ, ಚಾರ್ಜಿಂಗ್ ಸೌಲಭ್ಯದ ಲಭ್ಯತೆ ಮುಂತಾದ ಮಾಹಿತಿಗಳನ್ನು ಇವಿ ಮಿತ್ರ ಆ್ಯಪ್ ನಲ್ಲಿ ಪಡೆಯಬಹುದಾಗಿದೆ. ಅಲ್ಲದೇ ಆ್ಯಪ್ ಮೂಲಕ ವಾಹನಗಳನ್ನು ಮುಂಚಿತವಾಗಿ ಚಾರ್ಜಿಂಗ್ ಮಾಡಿಕೊಳ್ಳಲು ಬುಕ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಇವಿ ವಾಹನಗಳು ಪರಿಸರ ಸ್ನೇಹಿ ವಾಹನಗಳಾಗಿದ್ದು ಸುಲಭವಾಗಿ ನಿರ್ವಹಣೆ ಮಾಡಬಹುದಾಗಿದೆ. ಇದರ ಬಳಕೆಯಿಂದ ಫಾಸಿಲ್ ವಾಹನಗಳಂತೆ ವಾಯುಮಾಲಿನ್ಯ ಇರುವುದಿಲ್ಲ ಹಾಗೂ ಭವಿಷ್ಯದಲ್ಲಿ ಇಂಧನ ಕೊರತೆಯ ಭಯಯು ಇರುವುದಿಲ್ಲ. ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿರುವ ಹೆಗ್ಗಳಿಕೆ ಬೆಸ್ಕಾಂಗೆ ಸಲ್ಲುತ್ತದೆ. ಬೆಸ್ಕಾಂ ವತಿಯಿಂದ ಈಗಾಗಲೇ 136 ಚಾರ್ಜಿಂಗ್ ಸ್ಟೇಷನ್ ಗಳನ್ನು ಆರಂಭಿಸಲಾಗಿದ್ದು, ಅತ್ಯಂತ ಕಡಿಮೆ ದರದಲ್ಲಿ ಚಾರ್ಜಿಂಗ್ ಸೌಲಭ್ಯ ನೀಡಲಾಗುತ್ತಿದೆ. ಸಾರ್ವಜನಿಕರು ಇವಿ ಮಿತ್ರ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವುದರ ಮೂಲಕ ಇವಿ ಚಾರ್ಜಿಂಗ್ ವ್ಯವಸ್ಥೆಯನ್ನು ಮತ್ತಷ್ಟು ಸುಲಭಗೊಳಿಸಿಕೊಳ್ಳಿ. ಮಹಾಂತೇಶ ಬೀಳಗಿ, ವ್ಯವಸ್ಥಾಪಕ ನಿರ್ದೇಶಕರು, ಬೆಸ್ಕಾಂ.