
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.27: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣವನ್ನು ವಿರೋಧಿಸಿ, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಇ.ಡಿ ಯವರು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಇಂದು ನಗರದ ಸುಧಾ ಕ್ರಾಸ್ ಬಳಿಯ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಮುಖಂಡರು ಸತ್ಯಾಗ್ರಹ ನಡೆಸಿದರು.
ಕೇಂದ್ರ ಸರ್ಕಾರ ಹಾಗೂ ಬಿಜೆಪಿಯು ಸಾಂಸ್ಥಿಕ ಏಜೆನ್ಸಿಗಳ ದುರುಪಯೋಗದ ವಿರುದ್ಧ ನಡಸಿದ ಶಾಂತಿಯುತ ಸತ್ಯಾಗ್ರಹದಲ್ಲಿ ಪಕ್ಷದ ನಗರ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್, ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯುಡು, ಸದಸ್ಯರಾದ ಮಿಂಚು ಶ್ರೀನಿವಾಸ್, ವಿವೇಕ್, ಪಿ.ಗಾದೆಪ್ಪ, ಜಿ.ಪಂ ಮಾಜಿ ಸದಸ್ಯರಾದ ಎ.ಮಾನಯ್ಯ, ನಾರಾ ಭರತ್ ರೆಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.