ಈದ್ಗಾ ಮೈದಾನ ಗಣೇಶನಿಗೆ ಅದ್ದೂರಿ ವಿದಾಯ

ಹುಬ್ಬಳ್ಳಿ,ಸೆ.2 : ನಗರದ ಕಿತ್ತೂರು ಚೆನ್ನಮ್ಮ ವೃತ್ತರ ಬಳಿ ಇರುವ ಈದ್ಗಾ ಮೈದಾನದಲ್ಲಿ ಮೂರು ದಿನಗಳವರೆಗೆ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಯಿತು.
ಮೆರವಣಿಗೆ ಉದ್ದಕ್ಕೂ ವಿವಿಧ ಕಲಾತಂಡಗಳಾದ ನಾಸಿಕ್ ಡೋಲ್, ಝಾಂಜ್ ಮೇಳದೊಡನೆ ಭಕ್ತರು ಹೆಜ್ಜೆ ಹಾಕಿದ್ದು, ನೋಡುಗರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಅಧ್ಯಕ್ಷ ಸಂಜಯ ಬಡಸ್ಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಸದಸ್ಯರಾದ ವೀರಣ್ಣ ಸವಡಿ, ಶಿವು ಮೆಣಸಿನಕಾಯಿ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತಿತರರು ಪಾಲ್ಗೊಂಡಿದ್ದರು.
ಮೆರವಣೆಗೆಯುದ್ದಕ್ಕೂ ರಸ್ತೆಯ ಎರೆಡೂ ಬದಿಗಳಲ್ಲಿಯೂ ಭಾರೀ ಸಂಖ್ಯೆಯಲ್ಲಿ ಜನತೆ ನೆರೆದು ಮೆರವಣಿಗೆಯನ್ನು ವೀಕ್ಷೀಸಿದರು.