ಈವರೆಗೆ 155 ದಶಲಕ್ಷ ಡೋಸ್ ಲಸಿಕೆ ರಾಜ್ಯಗಳಿಂದ ರವಾನೆ

ನವದೆಹಲಿ, ಏ.27- ದೇಶದಲ್ಲಿ ಮೇ 1ರಿಂದ 18 ವರ್ಷ ದಾಟಿದ ಜನರಿಗೆ ಕೊರೋನಾ ಸೋಂಕಿನ ಲಸಿಕೆ ಹಾಕಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು ಇದುವರೆಗೂ 155 ದಶಲಕ್ಷ ಡೋಸ್ ಲಸಿಕೆಯನ್ನು ರಾಜ್ಯಗಳಿಗೆ ಕಳುಹಿಸಿಕೊಟ್ಟಿದೆ.

ಸೋಮವಾರ ಸಂಜೆ ತನಕ ವಿವಿಧ ರಾಜ್ಯಗಳಿಗೆ 15.5 ಕೋಟಿ ಡೋಸ್ ಲಸಿಕೆ ಕಳುಹಿಸಿಕೊಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಮೇ 1 ರಿಂದ ರಾಜಸ್ಥಾನ ಮತ್ತು ಪಂಜಾಬ್ ನಲ್ಲಿ ಕೊರೋನಾ ಸೋಂಕಿಗೆ ಲಸಿಕೆ ಹಾಕಲು ಸಾಧ್ಯವಿಲ್ಲ ರಾಜ್ಯದಲ್ಲಿ ಅಗತ್ಯವಿರುವಷ್ಟು ಲಸಿಕೆ ಲಭ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ಕರ್ನಾಟಕ ,ತಮಿಳುನಾಡಿನಲ್ಲಿ ಮೇ ತಿಂಗಳ ಒಂದರಿಂದ ಲಸಿಕೆ ಹಾಕಲಾಗುವುದು ಅವರಿಗೆ ವಿವಿಧ ರಾಜ್ಯಗಳಲ್ಲಿ ಹೊಸಕಿಹಾಕುವ ಅಭಿಯಾನ ನಡೆಯಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಮೇ ತಿಂಗಳ ಒಂದರಿಂದ ದೇಶದ ವಿವಿಧ ಭಾಗಗಳಲ್ಲಿ ಲಸಿಕೆ ಹಾಕುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದುವರೆಗೆ 15,53,11,140 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಿಕೊಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಪೈಕಿ 14,42,76,074 ಮಂದಿಗೆ ಬರೋಣ ಸೋಂಕಿನ ಲಸಿಕೆ ಹಾಕಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1,10,35,066 ಡೋಸ್ ಲಸಿಕೆ ಬಾಕಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದರ ಜೊತೆಗೆ ಇನ್ನೂ ಹೆಚ್ಚುವರಿಯಾಗಿ 97,05,000 ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದೆ

ದೇಶದಲ್ಲಿ ಅತಿ ಹೆಚ್ಚು ಸೋಂಕಿನಿಂದ ಬಾಧಿತರಾಗಿರುವ ಮಹಾರಾಷ್ಟ್ರ ದೆಹಲಿ ಚತ್ತೀಸ್ಗಡ ಉತ್ತರಪ್ರದೇಶ ಕರ್ನಾಟಕ-ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಕಳುಹಿಸಿಕೊಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಅತಿ ಹೆಚ್ಚು ಸೋಂಕಿಗೆ ಒಳಗಾಗಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರಕ್ಕೆ ಹೆಚ್ಚಿನ ಲಸಿಕೆ ಪೂರೈಕೆ ಮಾಡಲಾಗಿದೆ ಇನ್ನೂ ಹೆಚ್ಚಿನ ಲಸಿಕೆಯನ್ನು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆvvvvv