ಈಶಾನ್ಯ ಕರ್ನಾಟಕ ಪದವೀಧರಚುನಾವಣೆ: ಮೈಕ್ರೋ ವೀಕ್ಷಕರಿಗೆ ತರಬೇತಿ

ಕಲಬುರಗಿ,ಮೇ.22: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆಯ ಮತದಾನವು ಬರುವ ಜೂನ್ 3 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮತಗಟ್ಟೆಗಳಿಗೆ ನೇಮಿಸಲಾದ ಮೈಕ್ರೋ ವೀಕ್ಷಕರಿಗೆ ತರಬೇತಿ ಆಯೋಜಿಸಲಾಗಿತ್ತು.

ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಸಮಕ್ಷಮದಲ್ಲಿ ನ್ಯಾಷನಲ್ ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರ ರೆಡ್ಡಿ ಅವರು ಮೈಕ್ರೋ ವೀಕ್ಷಕರಿಗೆ ಮತದಾನ ಪ್ರಕ್ರಿಯೆ ಕುರಿತು ಸವಿಸ್ತಾರವಾಗಿ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಸೇರಿದಂತೆ ಚುನಾವಣೆಗೆ ನಿಯೋಜಿಸಿದ ಜಿಲ್ಲೆಯ ಮೈಕ್ರೋ ವೀಕ್ಷಕರು ತರಬೇತಿಯಲ್ಲಿ ಭಾಗಿಯಾಗಿದ್ದರು.