ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ:ಪೋಲಿಂಗ್ ಸಿಬ್ಬಂದಿಗೆ ತರಬೇತಿ

ಕಲಬುರಗಿ,ಮೇ.22: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆಯ ಮತದಾನವು ಬರುವ ಜೂನ್ 3 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪೋಲಿಂಗ್ ಸಿಬ್ಬಂದಿಗಳಿಗೆ ಮೊದಲನೇ ಹಂತದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಸಮಕ್ಷಮದಲ್ಲಿ ನ್ಯಾಷನಕಲ್ ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರ ರೆಡ್ಡಿ ಅವರು ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆ ಕುರಿತು ಸವಿಸ್ತಾರವಾಗಿ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ರೂಪಿಂದರ್ ಸಿಂಗ್ ಕೌರ್, ಆಶಪ್ಪ ಪೂಜಾರಿ ಸೇರಿದಂತೆ ಪೆÇೀಲಿಂಗ್ ಸಿಬ್ಬಂದಿಗಳು ತರಬೇತಿಯಲ್ಲಿ ಭಾಗಿಯಾಗಿದ್ದರು.