ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ:ಮತದಾರರಿಗೆ ರಜೆ ಘೋಷಣೆ

ಕಲಬುರಗಿ.ಅ.27:ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ದಿನಾಂಕ: 28-10-2020 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮಾಡಲು ಕಲಬುರಗಿ ಜಿಲ್ಲೆಯ ಕ್ಷೇತ್ರ ವ್ಯಾಪ್ತಿಯ ಎಲ್ಲ ಮತದಾರರಿಗೆ ರಜೆ ಘೋಷಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗಳಾದ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.
ಅದೇ ರೀತಿ ಕಲಬುರಗಿ ಜಿಲ್ಲೆಯ ಕ್ಷೇತ್ರ ವ್ಯಾಪ್ತಿಯೊಳಗೆ ಬರುವ ಒಟ್ಟು 41 ಮತದಾನ ಕೇಂದ್ರವಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.