ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಅಧಿಸೂಚನೆ ಪ್ರಕಟ

ಕಲಬುರಗಿ:ಮೇ.09: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಚುನಾವಣಾ ಅಧಿಸೂಚನೆ ಪ್ರಕಟಿಸಿದರು.

  ಅಧಿಸೂಚನೆ ಪ್ರಕಟ ದಿನಾಂಕದಿಂದ ಮೇ ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಕಾರ್ಯ ಮೇ 17ರಂದು ನಡೆಯಲಿದ್ದು, ಮೇ 20ಕ್ಕೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ  ನಡೆಯಲಿದೆ ಎಂದು ತಿಳಿಸಲಾಗಿದೆ.
 ಮೊದಲನೇ ದಿನ ಒಂದು ನಾಮಪತ್ರ ಸಲ್ಲಿಕೆ: ಚುನಾವಣಾ ಅಧಿಸೂಚನೆ ಹೊರಡಿಸಿದ ದಿನ ಗುರುವಾರವೇ ಪಕ್ಷೇತರ ಅಭ್ಯರ್ಥಿ ಸಾಯಬಣ್ಣಾ ಜಮಾದಾರ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.