ಈಶಾನ್ಯ ಭಾರತದಲ್ಲಿ ಮಳೆನಿರೀಕ್ಷೆ

ನವದೆಹಲಿ,ಏ.೩೦-ಮುಂದಿನ ೪-೫ ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಚಂಡಮಾರುತ ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹೀಗಾಗಿ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯು ಇಂದು ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮುಂದುವರಿಯುವ ನಿರೀಕ್ಷೆಯಿದೆ.
ಇದಲ್ಲದೆ, ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗಿದೆ ಮತ್ತು ಭೂಕುಸಿತ ಸಂಭವಿಸಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಮುಂದಿನ ೫ ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕನೇ ದಿನವೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭೂಕುಸಿತದ ಸಾಧ್ಯತೆ ಹೆಚ್ಚಲಿದೆ.
ಬಿಸಿಗಾಳಿ ಹೆಚ್ಚುತ್ತಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಬಿಹಾರ, ಬಂಗಾಳ ಮತ್ತು ಒಡಿಶಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಪೆನಿನ್ಸುಲರ್ ಭಾರತದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಬಿಸಿಗಾಳಿಯ ಬಗ್ಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಿನದಿಂದ ದಿನಕ್ಕೆ ದೇಶದಲ್ಲಿ ಹವಾಮಾನ ವೈಪರೀತ್ಯ ಉಂಟಾಗುತ್ತಿದ್ದು, ಪೂರ್ವದಿಂದ ಉತ್ತರಕ್ಕೆ ಮತ್ತು ದಕ್ಷಿಣದಿಂದ ಪಶ್ಚಿಮ ಭಾಗದಲ್ಲಿ ದೇಶದ ವಾತಾವರಣ ಕಾದು ಕೆಂಡದಂತೆ ಆಗಿದೆ. ಏತನ್ಮಧ್ಯೆ, ಕೆಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಏಪ್ರಿಲ್ ೩೦ ರಿಂದ ಮೇ ೨ ರವರೆಗೆ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮತ್ತು ಹಿಮಪಾತವನ್ನು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಸ್ಕೈಮೆಟ್ ಹವಾಮಾನದ ಪ್ರಕಾರ, ಉತ್ತರಾಖಂಡದಲ್ಲಿ ಮುಂದಿನ ೨೪ ಗಂಟೆಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತದಲ್ಲಿ ಚದುರಿದ ಲಘು ಮಳೆಯೊಂದಿಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು.
ವಿದರ್ಭ, ಮರಾಠವಾಡ, ತೆಲಂಗಾಣ, ಛತ್ತೀಸ್‌ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್‌ನ ಉತ್ತರ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆ ಬೀಳಬಹುದು. ಉತ್ತರ ಹರಿಯಾಣ ಮತ್ತು ವಾಯವ್ಯ ರಾಜಸ್ಥಾನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೇರಳದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಇಂದು ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ ೧ ರವರೆಗೆ ಪೂರ್ವ ಭಾರತದಲ್ಲಿ ತೀವ್ರ ಶಾಖದ ಅಲೆಗಳು ಮುಂದುವರಿಯುವ ನಿರೀಕ್ಷೆಯಿದೆಹವಾಮಾನ ಇಲಾಖೆಯ ಪ್ರಕಾರ, ಮುಂದಿನ ೫ ದಿನಗಳವರೆಗೆ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ.