ಈಶಾನ್ಯ ರಸ್ತೆ ಸಾರಿಗೆ ವತಿಯಿಂದ ಪರಿಸರ ದಿನ ಆಚರಣೆ

ಬಳ್ಳಾರಿ ಜೂ.09 : ಹೊಸಪೇಟೆ ವಿಭಾಗದ ವ್ಯಾಪ್ತಿಯ ಹೊಸಪೇಟೆ, ಕೂಡ್ಲಿಗಿ, ಹಡಗಲಿ, ಸಂಡೂರು, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಘಟಕ ಹಾಗೂ ಕೇಂದ್ರ ಬಸ್ ನಿಲ್ದಾಣ ಹೊಸಪೇಟೆಯಲ್ಲಿ, ಉಪ ಬಸ್‍ನಿಲ್ದಾಣಗಳಲ್ಲಿ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿಭಾಗದ ವ್ಯಾಪ್ತಿಯಲ್ಲಿ 741 ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ, ಸರಳವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಮತ್ತಿತರರು ಇದ್ದರು.