ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ವಿರುದ್ಧ ಪಿತೂರಿ: ಚೌಧರಿ

ನವದೆಹಲಿ,ನ.೨೫- ಮೇಘಾಲಯ ಮಾತ್ರವಲ್ಲ ಇಡೀ ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ರಾತ್ರೋರಾತ್ರಿ ಮೇಘಾಲಯದಲ್ಲಿ ೧೨ ಕಾಂಗ್ರೆಸ್ ಶಾಸಕರು ತೃಣಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ,ನಾಯಕರು ಹಾಗೂ ಮುಖಂಡರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ತಂತ್ರ ಮತ್ತು ಹುನ್ನಾರ ನಡೆದಿದೆ ಎಂದು ಅವರು ದೂರಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದಲ್ಲ ಮೊದಲು ನಿಮ್ಮ ಪಕ್ಷದ ಚಿಹ್ನೆಯಡಿ ಅಭ್ಯರ್ಥಿಗಳನ್ನು ನಿಲ್ಲಿಸಿ ಚುನಾವಣೆಯಲ್ಲಿ ಗೆದ್ದು ತೋರಿಸಿ ಎಂದು ಅವರು ತೃಣಮೂಲವಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ನೇರವಾಗಿ ಸವಾಲು ಹಾಕಿದ್ದಾರೆ.
ಸ್ವಂತ ಬಲದ ಮೇಲೆ ಪ್ರಾಣ ಮೂಲ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಗೆದ್ದು ಬಂದರೆ ಅದನ್ನು ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ
ರಾತ್ರೋ ರಾತ್ರಿ ನಡೆದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಆಗುವ ವಿಧಾನಸಭೆಯ ವಿರೋಧಪಕ್ಷದ ನಾಯಕ ಅಪೂರ್ವ ಸಂಗಮ ಸೇರಿದಂತೆ ೧೨ ಶಾಸಕರು ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಶಾಸಕರು ಮಾಜಿ ಸಂಸದರು ಮಾಜಿ ಶಾಸಕರು ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.