ಈಶ್ವರ ಖಂಡ್ರೆಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಅವಿನಾಶ ಜಗನ್ನಾಥ ಒತ್ತಾಯ

ಯಾದಗಿರಿ, ಮೇ. 16: ಕಲ್ಯಾಣ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಭಾಲ್ಕಿಯ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಮಾಡುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಅವಿನಾಶ ಜಗನ್ನಾಥ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಲ್ಯಾಣ ಕರ್ನಾಟಕದಲ್ಲಿ ಕಷ್ಟದ ಸಮಯದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಅದರಲ್ಲೂ ಲಿಂಗಾಯತ ಮತಗಳನ್ನು ಪಕ್ಷಕ್ಕೆ ತರುವಲ್ಲಿ ನಿರಂತರವಾಗಿ ಈ ಭಾಗದಲ್ಲಿ ಸಂಚರಿಸಿ ಪಕ್ಷ ಸಂಘಟಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಮತ್ತೆ ಗತವೈಭವ ಮರಳಿ ತರುವ ನಿಟ್ಟಿನಲ್ಲಿ ನಿರಂತರ ಶ್ರಮಿಸಿರುವ ಅವರ ಶ್ರಮವನ್ನು ಹೈಕಮಾಂಡ್ ಗುರ್ತಿಸಬೇಕು ಎಂದು ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ಪಕ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಈಶ್ವರ ಖಂಡ್ರೆ ಅವರ ಕೊಡುಗೆ ಅಪಾರವಾಗಿದ್ದು, ಈ ಭಾಗದಲ್ಲಿನ ಲಿಂಗಾಯತರು ಹಾಗೂ ಎಲ್ಲ ಸಮುದಾಯದವನ್ನು ಜೊತೆಗೆ ಕರೆದೊಯ್ಯ ಬಲ್ಲಿ ವೀರಶೈವ ಲಿಂಗಾಯತ ಸಮುದಾಯದ ನಾಯಕರಾಗಿರುವ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದು ಈ ಭಾಗದ ಎಲ್ಲ ಜನತೆಯ ಆಶಯವೂ ಆಗಿದ್ದು ವಿಶೇಷವಾಗಿ ವೀರಶೈವ ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಅನಿಸಿಕೆಯೂ ಆಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.