
ಬೀದರ್:ಮೇ.24: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಒತ್ತಾಯಿಸಿದ್ದಾರೆ.
ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷ ಬಲಪಡಿಸಲು ಶ್ರಮಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಇವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವೀರಶೈವ ಲಿಂಗಾಯತ ಸೇರಿದಂತೆ ಎಲ್ಲ ಸಮುದಾಯಗಳ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರಲು ಕಾರಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸತತ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ಹಿರಿಯ ಶಾಸಕರಲ್ಲಿ ಒಬ್ಬರಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವವನ್ನೂ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡಿದರೆ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾ ಸಿಗಲಿದೆ. ರಾಜ್ಯದ ಅಭಿವೃದ್ಧಿಗೂ ನೆರವಾಗಲಿದೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ