ಈಶ್ವರ ಖಂಡ್ರೆಯವರಿಗೆ ಮುಖ್ಯ ಮಂತ್ರಿ ಮಾಡಿ : ಬಸವಲಿಂಗದೇವರು

ಭಾಲ್ಕಿ:ಮೇ.17: ಕ್ಷೇತ್ರದ ಶಾಸಕರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರಿಗೆ ರಾಜ್ಯದ ಮುಖ್ಯ ಮಂತ್ರಿ ಸ್ಥಾನ ನೀಡಬೇಕು ಎಂದು ಖಟಕಚಿಂಚೋಳಿ ಹುಗ್ಗೆಳ್ಳಿ ಹರೇಮಠದ ಪೀಠಾಧಿಪತಿ ಶ್ರೀ ಬಸವಲಿಂಗ ದೇವರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಶಾಸಕ ಈಶ್ವರ ಖಂಡ್ರೆಯವರು ರಾಜ್ಯದ ಪ್ರಭಾವಿ ವೀರಶೈವ ಲಿಂಗಾಯತ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವಲ್ಲಿ ಅವರ ಪಾತ್ರ ಬಹುಮುಖ್ಯವಾಗಿದೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಜ್ವಲ ಭವಿಷ್ಯವಿದೆ. ಕಾರಣ ಎಲ್ಲಾ ವೈಮನ್ಸುಗಳನ್ನು ಬದಿಗೊತ್ತಿ ಕಾಂಗ್ರೆಸ್ ಹೈಕಮಾಂಡ್ ಈಶ್ವರ ಖಂಡ್ರೆಯವರಿಗೆ ಮುಖ್ಯ ಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈಶ್ವರ ಖಂಡ್ರೆಯವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಯಾರೂ ಅದಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ. ಕಾರಣ ಈಶ್ವರ ಖಂಡ್ರೆಯವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.