ಈ ಬಾರಿ ಮೂರು ಕ್ಷೇತ್ರದಲ್ಲಿ ಗೆಲುವು ಖಚಿತ ಜಿಲ್ಲಾ ಅಧ್ಯಕ್ಷ ಸೈಯದ್ ಅಕ್ರಂ

ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಮಾ.02:- ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗಳಾದ ಮಂಡ್ಯದಿಂದ ಸ್ಪರ್ಧಿಸಿರುವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಮೈಸೂರು ನಿಂದ ಯದುವೀರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಬಾಲರಾಜ್ ಗೆಲುವು ಶತಸಿದ್ದ ಎಂದು. ಬಿಜೆಪಿ ಅಲ್ಪಸಂಖ್ಯಾತ ಸಮಿತಿಯ ಜಿಲ್ಲಾ ಅಧ್ಯಕ್ಷ ಸೈಯದ್ ಅಕ್ರಂ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಕಛೇರಿಗೆ ಬೇಟಿ ನೀಡಿ ಮಾತನಾಡಿದ ಜಿಲ್ಲಾ ಅಧ್ಯಕ್ಷರು ಹೆಚ್.ಡಿ.ಕುಮಾರಸ್ವಾಮಿ ಅವರು ರೈತರ ಮತ್ತು ಕೃಷಿಗೆ ಹೆಚ್ಚು ಒಲವು ಹೊಂದಿರುವ ಇವರು ಮಂಡ್ಯ ಲೋಕಸಭಾದಿಂದ ಆಯ್ಕೆಯಾಗಲಿದ್ದಾರೆ ಹಾಗೂ ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿ ಯಾಗುವುದು ಖಚಿತ ಮತ್ತು ಮೈಸೂರು. ಚಾಮರಾಜನಗರ ಇಬ್ಬರು ಅಭ್ಯರ್ಥಿಗಳು ಸರಳ ಸಜ್ಜನಿಕೆ ವ್ಯಕ್ತಿಯಾದ ಅವರಿಗೆ ಜಿಲ್ಲೆ ಹಾಗೂ ತಾಲೂಕಿನ ಜನತೆ ಹೆಚ್ಚಿನ ಮತ ನೀಡಿದ್ದಾರೆ ಎಂದರು.
ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಎಲ್ಲರೂ ಒಗ್ಗೂಡಿ ಶ್ರಮಿಸಿದ್ದಾರೆ. ಹೀಗಾಗಿ ಮೂರು ಕ್ಷೇತ್ರದ ಅಭ್ಯರ್ಥಿಗಳ ಗೆಲುವು ಖಚಿತವಾಗಿದೆ. ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ವಿಶ್ವ ಮಟ್ಟದಲ್ಲಿ ಪ್ರಖ್ಯಾತಿ, ಗೌರವ ತಂದು ಕೊಟ್ಟ ವಿಶ್ವ ನಾಯಕ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದರು.