(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.26: ಈ ಬಾರಿ ಸಿರುಗುಪ್ಪ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸಲಿದ್ದು. ಶಾಸಕ ಸೋಮಲಿಂಗಪ್ಪ ಅವರಿಗೆ ಸೋಲು ಖಚಿತ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಹೇಳಿದ್ದಾರೆ.
ಅವರು ನಿನ್ನೆ ಸಿರುಗುಪ್ಪ ಪಟ್ಟಣದಲ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಬಿ.ಎಂ.ನಾಗರಾಜ್ ಅವರೊಂದಿಗೆ ವಿವಿಧ ಪ್ರದೇಶಗಳಿಗೆ ತೆರಳಿ ಮತ ಯಾಚನೆ ಮಾಡಿ ಮಾತನಾಡುತ್ತಿದ್ದರು.
ಕೋಮವಾದಿ ಬಿಜೆಪಿ ದೇಶದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತದೆ. ಮುಂಸ್ಲಿಂ ಸಮುದಾಯವೂ ಇದೇ ದೇಶದಲ್ಲಿ ಹುಟ್ಟಿ ಬೆಳೆದವರಿಗೆ ಮಿಸಲಾತಿ ತೆಗೆಯಲು ಜೆಪಿಪಿ ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಬಿಜೆಪಿ ನಡೆ ಏನೆಂದು ಸಾರ್ಥವಾಗುತ್ತೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು ಎಂದು ಕಾಣುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದರು.
ಅಭ್ಯರ್ಥಿ ಬಿ.ಎಂ.ನಾಗರಾಜ್ ಮತ್ತು ಪಕ್ಷದ ಮುಖಂಡರು ಇದ್ದರು.