ಈ ವಾರದಿಂದ ರಾಜ್ಯಾದ್ಯಂತ ಚಿತ್ರಮಂದಿರ ಬಂದ್

ಬೆಂಗಳೂರು,ಏ.೨೦-ಕೊರೊನಾದಿಂದ ತತ್ತರಿಸಿ ಹೋಗಿರುವ ಚಿತ್ರರಂಗಕ್ಕೆ ಮತ್ತೊಂದು ಆತಂಕ ಎದುರಾಗಿದ್ದು, ರಾಜ್ಯದಲ್ಲಿ ಈ ಶುಕ್ರವಾರದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಪ್ರದರ್ಶಕರು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿಲ್ಲ.
ಹೀಗಾಗಿ ಶುಕ್ರವಾರದಿಂದ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು ಎಂದು ಪ್ರದರ್ಶಕರ ವಲಯದ ಅಧ್ಯಕ್ಷ ಕೆ. ಚಂದ್ರಶೇಖರ್ ಹೇಳಿದ್ದಾರೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರು ಬರುತ್ತಿಲ್ಲ. ರಾಜ್ಯದಲ್ಲಿ ಈಗಾಗಲೇ ೬೫೦ ಕ್ಕೂ ಹೆಚ್ಚು ಚಿತ್ರಮಂದಿರಗಳು ಮುಚ್ಚಿವೆ. ಥಿಯೇಟರ್ ಗಳು ತೀವ್ರ ನಷ್ಟ ಅನುಭವಿಸುತ್ತಿವೆ. ಹೀಗಾಗಿ ಶುಕ್ರವಾರದಿಂದ ರಾಜ್ಯಾದ್ಯಂತ ಎಲ್ಲ ಚಿತ್ರಮಂದಿರಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.