ಉಕ್ಕಿನ ಮನುಷ್ಯನಿಗೆ ಗೌರವ ನಮನ

ನವದೆಹಲಿ ಅಕ್ಟೋಬರ್ ೩೧. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ೧ ೪೫ನೇ ಜನ್ಮದಿನದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿಂದೂ ಗೌರವ ನಮನ ಸಲ್ಲಿಸಿದ್ದಾರೆ.

ದೇಶದ ಮೊದಲ ಗೃಹ ಸಚಿವರು ಆಗಿದ್ದ ಸರ್ದಾರ್ ವಲ್ಲಬಾಯಿ ಪಟೇಲ್ ಅವರನ್ನು ಸ್ಮರಣೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿರುವ ಅವರು ದೇಶದ ಐಕ್ಯತೆಯನ್ನು ಅಂತಹ ಮಹಾನ್ ಮೇಧಾವಿ ಎಂದು ಬಣ್ಣಿಸಿದ್ದಾರೆ.

ದೇಶದ ಐಕ್ಯತೆ ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮನ್ನ ಸಮರ್ಪಿಸಿ ಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

೨೦೧೪ ರಿಂದ ಅಕ್ಟೋಬರ್ ೩೧ನೇ ದಿನವನ್ನು ರಾಷ್ಟ್ರೀಯ ಐಕ್ಯತಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯಪೂರ್ವದಲ್ಲಿ ಭಾರತದಲ್ಲಿ ಹರಿದು ಹಂಚಿಹೋಗಿದ್ದ ೫೬೨ ರಾಜವಂಶಸ್ಥ ಆಡಳಿತದಲ್ಲಿದ್ದ ರಾಜ್ಯಗಳನ್ನು ಒಗ್ಗೂಡಿಸಿ ಭಾರತ ಗಣರಾಜ್ಯದ ವ್ಯಾಪ್ತಿಗೆ ತಂದಂತಹ ಕೀರ್ತಿ ಸರ್ದಾರ್ ವಲ್ಲಬಾಯ್ ಪಟೇಲ್ ಸಲ್ಲುತ್ತದೆ ಎಂದು ಅವರು ಹೇಳಿದ್ದಾರೆ.

ಈ ನಡುವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಗೃಹ ಸಚಿವ ಅಮಿತ್ ಶಾ ಮತ್ತಿತರರು ಸರ್ದಾರ್ ವಲ್ಲಬಾಯ್ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.