ಉಗ್ರನ ವಿಚಾರಣೆ

ಬೆಂಗಳೂರು, ಜು. ೨೫- ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕಿತ ಉಗ್ರನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಉಗ್ರ ಸಂಘಟನೆಯೊಂದಕ್ಕೆ ಸೇರಿದವನೆಂದು ಹೇಳಲಾದ ಶಂಕಿತ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜತೆಗೆ ಉಗ್ರನ ಜತೆ ಇದ್ದ ಸ್ಥಳೀಯ ಸಹಚರನನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಂಕಿತ ಉಗ್ರ ಮತ್ತು ಆತನ ಜತೆ ಇರುವ ಸ್ಥಳೀಯ ಸಹಚರರ ಮಾಹಿತಿ, ಚಟುವಟಿಕೆ ಎಲ್ಲವನ್ನು ಕಲೆ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ಬೆಂಗಳೂರಿನ ಓಕುಳಿಪುರದಲ್ಲಿ ಬಂಧಿಸಿದ ನಂತರ ಮತ್ತೊಬ್ಬ ಉಗ್ರನನ್ನು ಪತ್ತೆಹಚ್ಚಿ ಬಂಧಿಸಿರುವ ಪೊಲೀಸರ ಕಾರ್ಯಕ್ಕೆ ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.