ಉಗ್ರರಿಂದ ಶಸ್ತ್ರಾಸ್ತ್ರ ವಶ

ಬೆಂಗಳೂರು,ಡಿ.೧೦-ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಸಮರ ಸಾರಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು
ಮಹಾರಾಷ್ಟ್ರ ಸೇರಿದಂತೆ ಬೆಂಗಳೂರಿನಲ್ಲಿ ನಡೆಸಿದ್ದ ದಾಳಿಯಲ್ಲಿ ಹಮಾಸ್ ಉಗ್ರರಿಗೆ ಸಂಬಂಧಿಸಿದ ಧ್ವಜ. ಗನ್, ಟ್ಯಾಪ್‌ಟಾಪ್, ಸೇರಿದ ಹಲವು ವಸ್ತುಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಪುಲಿಕೇಶಿನಗರದಲ್ಲಿ ನಡೆದಿದ್ದ ದಾಳಿಯು ಇಂದು ಮುಂದುವರೆದಿದ್ದು, ಶಂಕಿತ ಉಗ್ರ ಅಲಿ ಅಬ್ಬಾಸ್ ಫ್ಲಾಟ್ ಉರ್ದು ಶಾಲೆಯಲ್ಲಿ ಶೋಧ ಮುಂದುವರೆದಿದ್ದು, ಇಲ್ಲಿ ದೊರಕಿರುವ ವಸ್ತುಗಳ ಬಗ್ಗೆ ಪ್ರತ್ಯೇಕ ಮಾಹಿತಿ ಲಭ್ಯವಾಗಿಲ್ಲ.
ಮಹಾರಾಷ್ಟ್ರದ ಹಲವೆಡೆ ಶೋಧ ನಡೆಸಿದ ವೇಳೆ ೫೧ ಹಮಾಸ್ ಧ್ವಜ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ, ದಾಳಿಯಲ್ಲಿ ೬೮.೦೩ ಲಕ್ಷ ನಗದು,ಒಂದು ಪಿಸ್ತೂಲ್, ಎರಡು ಏರ್ ಗನ್, ಎಂಟು ಚಾಕುಗಳು, ಎರಡು ಲ್ಯಾಪ್‌ಟಾಪ್, ಆರು ಹಾರ್ಡ್ ಡಿಸ್ಕ್, ಮೂರು ಸಿಡಿಗಳು, ೩೮ ಮೊಬೈಲ್, ಹತ್ತು ಮ್ಯಾಗಜೀನ್ ಬುಕ್ಸ್ ಹಾಗೂ ೫೧ ಹಮಾಸ್ ಧ್ವಜಗಳನ್ನು ಜಪ್ತಿ ಮಾಡಿ ಶೋಧ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುಲಿಕೇಶಿನಗರ, ಮಹಾರಾಷ್ಟ್ರದ ಪಡ್ಗಾ, ಬೊರಿವಲಿ, ಠಾಣೆ, ಮೀರಾ ರಸ್ತೆ ಹಾಗೂ ಪುಣೆ ಸೇರಿ ಒಟ್ಟು ೪೪ ಕಡೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕೈಗೊಂಡಿದ್ದ ಎನ್‌ಐಎ ಅಧಿಕಾರಿಗಳು, ೧೫ ಮಂದಿ ಶಂಕಿತರನ್ನು ಬಂಧಿಸಿ ನಡೆಸಿದ ತೀವ್ರವಿಚಾರಣೆಯಲ್ಲಿ ಆದಿಲ್ ಖೋತ್ ಎಂಬಾತನ ಮನೆಯಲ್ಲಿ ಧ್ವಜಗಳು ಪತ್ತೆಯಾಗಿವೆ.
ಫಿರೋಜ್ ದಸ್ತಗೀರ್ ಖುವಾನ್, ರಾಜೀಲ್ ಅಬ್ದುಲ್, ಜಿಶಾನದ ಅಝಾಜ್, ಮುಕ್ಬುಲ್ ನಚಾಮ್ ಎಂಬುವರ ಮನೆಯಲ್ಲಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳು ಪತ್ತೆಯಾಗಿದ್ದರೆ, ಸೈಫ್ ಅತೀಕ್ ನಚಾಮ್, ರೇಹಾನದ ಅಶ್ಫಾಕ್ ಸೂಸೆ ಹಾಗೂ ಅತೀಫ್ ನಾಸಿರ್ ಮುಲ್ಲಾ ಮನೆಯಲ್ಲಿ ನಗದು ಹಣ ಪತ್ತೆಯಾಗಿದೆ
ಮಹಾರಾಷ್ಟ್ರದ ನಂಟಿನ ಮೇಳೆ ಪುಲಿಕೇಶಿನಗರದಲ್ಲಿ ಅಲಿ ಅಬ್ಬಾಸ್ ಎಂಬಾತರನ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದರು ಎನ್‌ಐಎ ಅಧಿಕಾರಿಗಳು ಈ ವೇಳೆ ಮನೆಯಲ್ಲಿದ್ದ ಮೊಬೈಲ್, ಲ್ಯಾಪ್‌ಟಾಪ್ ಪರಿಶೀಲನೆ ನಡೆಸಿದ್ದರು. ಎನ್‌ಐಎ ಪರಿಶೀಲನೆ ವೇಳೆ ಅಲಿ ಅಬ್ಬಾಸ್ ಮನೆಯಲ್ಲಿ ಹಣ ಮಾತ್ರ ಪತ್ತೆಯಾಗಿದೆ. ಅಬ್ಬಾಸ್ ವಿಚಾರಣೆ ನಡೆಸಿದ ಎನ್‌ಐಎ ಅಧಿಕಾರಿಗಳು ಮಹತ್ವದ ಮಾಹಿತಿಯನ್ನು ಕಲೆಹಾಕಿ ತನಿಖೆಯನ್ನು ಮುಂದುವರೆಸಿದ್ದಾರೆ.
ಪುಲಿಕೇಶಿನಗರದಲ್ಲಿ ದಾಳಿಗೆ ಒಳಗಾದ ಅಬ್ಬಾಸ್ ಅಲಿ ಮುಂಬಯು ಮೂಲದ ವ್ಯಕ್ತಿ. ಆತ ಪುಲಿಕೇಶಿನಗರ ವ್ಯಾಪ್ತಿಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಎಂದು ಗೊತ್ತಾಗಿದೆ. ಎನ್‌ಐಎ ಈತನನ್ನು ವಶಕ್ಕೆ ಪಡೆದು ಕರೆದೊಯ್ದಿದ್ದು, ಹೆಚ್ಚಿನ ವಿವರಗಳು ದೊರೆಯಬೇಕಿದೆ.
ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ಸಂಚು ರೂಪಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ ಸುಮಾರು ೪೪ ಸ್ಥಳಗಳಲ್ಲಿ ಇಂದು ಮುಂಜಾನೆ ದಾಳಿ ನಡೆಸಿತ್ತು. ಕರ್ನಾಟಕದಲ್ಲಿ ಒಬ್ಬಾತ ಸೇರಿದಂತೆ ೧೪ ಮಂದಿಯನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡಿದೆ. ೨೦೨೦ರಲ್ಲಿ ಕೂಡ ಎನ್‌ಐಎ ನಡೆಸಿದ ಇಂಥದೇ ಕಾರ್ಯಾಚರಣೆಯೊಂದರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನೇತ್ರತಜ್ಞನಾಗಿದ್ದ ಅಬ್ದುರ್ರಹಮಾನ್ ಎಂಬಾತ ಐಸಿಸ್ ಪರವಾಗಿ ಕಾರ್ಯಾಚರಿಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು.
ಕರ್ನಾಟಕದಲ್ಲಿ ಒಂದುಕಡೆ, ಪುಣೆಯಲ್ಲಿ ೨ ಕಡೆ, ಠಾಣೆ ಗ್ರಾಮೀಣದಲ್ಲಿ ೩೧ ಕಡೆ, ಠಾಣೆ ನಗರದಲ್ಲಿ ೯ ಕಡೆ ಮತ್ತು ಭಯಂದರ್‌ನಲ್ಲಿ ಒಂದು ಕಡೆ ಎನ್‌ಐಎ ಅಧಿಕಾರಿಗಳು ಶೋಧನೆ ನಡೆಸುತ್ತಿದ್ದಾರೆ. ‘ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್‌ಐಎ ವ್ಯಾಪಕ ತನಿಖೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ಇತ್ತೀಚಿಗೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ನಕಲಿ ನೋಟು ಜಾಲದ ಮೇಲೆ ಕಣ್ಣಿಟ್ಟು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿದ್ದರು.
ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈತ ೫೦೦, ೨೦೦, ಹಾಗೂ ೧೦೦ ರೂ ಮುಖಬೆಲೆಯ ನೋಟು ತಯಾರಿಸುತ್ತಿರುವುದು ಬಹಿರಂಗವಾಗಿದೆ.