ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ, 3 ಉಗ್ರರ ಹತ್ಯೆ

ಶ್ರೀನಗರ, ನ 8- ಜಮ್ಮು-ಕಾಶ್ಮೀರದ ಮಚಿಲ್ ಸೆಕ್ಟರ್ ನಲ್ಲಿ ಉಗ್ರರ ವಿರುದ್ದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಕ್ಯಾಪ್ಟನ್ ಸೇರಿದಂತೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಗುಂಡಿನ ಕಾಳಗದಲ್ಲಿ ಮೂವರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಸೇನಾ ಮೂಲಗಳು ತಿಳಿಸಿವೆ.
ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ.
ಘಟನಾ ಸ್ಥಳದಲ್ಲಿ ಒಂದು ಎಕೆ ರೈಫಲ್ ಮತ್ತು ಎರಡು ಬ್ಯಾಗ್ ಗಳನ್ನು ಸೇನಾ ಪಡೆ ವಶಪಡಿಸಿಕೊಂಡಿದೆ.
ಭಾರತೀಯ ಸೇನೆ ಮತ್ತು ಗಡಿ ಭದ್ರತಾ ಪಡೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿವೆ.