ಉಗ್ರರ ಸದ್ದಡಗಿಸುವ ಸಾಮರ್ಥ್ಯ ಭಾರತಕ್ಕಿದೆ

ನವದೆಹಲಿ,ಡಿ.೩೦- ಅವಶ್ಯಕತೆ ಬಿದ್ದಲ್ಲಿ ವಾಸ್ತವ ಗಡಿನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಪಾಕಿಸ್ತಾನ ಗಡಿಯಲ್ಲಿ ವಿನಾಕಾರಣ ಒಂದಲ್ಲ ಒಂದು ರೀತಿಯಲ್ಲ ಖ್ಯಾತೆ ತೆಗೆಯುತ್ತಿದೆ ಎಂದು ಅವರು ಗುಡುಗಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡಿರುವ ಅವರು ಕಳೆದ ಕೆಲ ತಿಂಗಳಲ್ಲಿ ಪಾಕಿಸ್ತಾನ, ೩೦೦ ರಿಂದ ೪೦೦ ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿದರು.
ಸೇನಾಪಡೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಮಟ್ಟ ಹಾಕಲು ಅವಿರತವಾಗಿ ಶ್ರಮಿಸುತ್ತಿದೆ. ಯಾವುದೇ ಪರಿಸ್ಥಿತಿ ಎದುರಾದರೂ ಭಯೋತ್ಪಾದಕರನ್ನು ಹೊಡೆದುರುಳಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಸ್ಪಷ್ಟಪಡಿಸಿದರು.
೨೦೧೬ರಲ್ಲಿ ಹುರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸರ್ಜಿಕಲ್ ದಾಳಿಯನ್ನು ಯಶಸ್ವಿಯಾಗಿ ಸೇನಾ ಪಡೆಗಳು ನಿರ್ವಹಿಸಿದೆ. ಪುಲ್ವಾಮಾ ದಾಳಿಯ ನಂತರ ಸೇನಾ ಪಡೆಗಳು ಉಗ್ರರ ತಾಣವಾದ ಬಾಲಾಕೋಟ್ ಶಿಬಿರದ ಮೇಲೆ ವೈಮಾನಿಕ ದಾಳಿಯನ್ನು ನಡೆಸಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ್ದನು ಸಮರ್ಥಿಸಿಕೊಂಡರು.