ಉಚಿತ ಆರೋಗ್ಯ ಚಿಕಿತ್ಸೆಯ ಸದುಪಯೋಗ ಪಡಿಸಿಕೊಳ್ಳಲು ಕರೆ

ಸಂಜೆವಾಣಿ ವಾರ್ತೆಸಂಡೂರು:ಅ:14:  ಬಡಜನತೆಗೆ ಅನುಕೂಲವಾಗಲಿ ಎನ್ನುವ ಮಹತ್ತರ ಉದ್ದೇಶದಿಂದ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಯೋಗದಲ್ಲಿ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಇದರ ಪೂರ್ಣ ಸದುಪಯೋಗವನ್ನು ಪಡಿಸಿಕೊಳ್ಳುವ ಮೂಲಕ ಆರೋಗ್ಯವಂತರಾಗಿ ಎಂದು ಎಂದು ಶಾಸಕ ಈ.ತುಕರಾಂ ತಿಳಿಸಿದರು.ಸಂಡೂರು ಪಟ್ಟಣದ ಗುರುಭವನದಲ್ಲಿ ಈ.ತುಕಾರಾಮ್ ಶಾಸಕರ ಸಹಕಾರದಲ್ಲಿ ಬೆಂಗಳೂರಿನ “ಸಪ್ತಗಿರಿ ಆಸ್ಪತ್ರೆ” ಯವರಿಂದ ಉಚಿತ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಾವು ಹಣವನ್ನು ಪಡೆಯಬಹುದು, ಅದರೆ ಅದನ್ನು ಕಳೆದುಕೊಂಡರೆ ಮತ್ತೆ ಪಡೆಯುತ್ತೇವೆ ಅದರೆ ಆರೋಗ್ಯ ಕಳೆದುಕೊಂಡರೆ ಮತ್ತೆ ಪಡೆಯುವುದು ಬಹು ಕಷ್ಟ ಅದ್ದರಿಂದ ಉತ್ತಮ ಆರೋಗ್ಯವನ್ನು ಹೊಂದಬೇಕು, ಹೃದಯಸಂಬಂಧಿಸಿದ ಬಹಳಷ್ಟು ಸಮಸ್ಯೆಗಳು ಇಂದು ಹೆಚ್ಚಾಗುತ್ತಿದ್ದು ಅದಕ್ಕಾಗಿ ಉಚಿತ ಚಿಕಿತ್ಸೆಯ ಶಿಬಿರವನ್ನು ಹಮ್ಮಿಕೊಂಡಿದ್ದು ಬಡವರು ಇದರ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆನೀಡಿದರು ಅಲ್ಲದೆ ಈ ಸಮಯದಲ್ಲಿ ಸನ್ಮಾನ್ಯ ಶ್ರೀ ಈ.ತುಕಾರಾಮ್ ಶಾಸಕರು ಚಿಕಿತ್ಸಾ ಶಿಬಿರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.