ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು:ಜ:09: ಕ್ಲಿಯರ್ ಮೆಡಿ ರೆಡಿಯಂಟ್ ಆಸ್ಪತ್ರೆ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಪುರಭವನದ ಒಳಾವರಣದಲ್ಲಿ ಆಯೋಜಿಸಲಾಗಿತ್ತು.
ಕ್ಲಿಯರ್ ಮೆಡಿ ರೆಡಿಯಂಟ್ ಆಸ್ಪತ್ರೆಯ ನುರಿತ ವೈದ್ಯರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಉಚಿತ ರಕ್ತದೊತ್ತಡ, ದಂತ ಚಿಕಿತ್ಸೆ ಹಾಗೂ ಸಾಮಾನ್ಯ ತಪಾಸಣೆಯನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭ ಅಲ್ಲಿಯೇ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಲ್ಲಿಗೆ ತೆರಳಿ ರಕ್ತದೊತ್ತಡ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭ ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಪಾಲಿಕೆಯ ಆರೋಗ್ಯಾಧಿಕಾರಿ ಡಾ.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.