
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ ಮಾ.13: ತಾಲೂಕಿನ ಮೋಕಾ ಗ್ರಾಮದಲ್ಲಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು, ಮಹರ್ಷಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಇವರ ಸಹಕಾರದೊಂದಿಗೆ ಆರಂಭಿಸಿರುವ ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್ ಪುಸ್ತಕವನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕ ನಾಗೇಂದ್ರ ಅವರು ಶಿಕ್ಷಣಕ್ಕೆ ಯಾವತ್ತಿಗೂ ನನ್ನ ಸಹಕಾರ ಇರುತ್ತದೆ. ವಾಲ್ಮೀಕಿ ಯುವ ವೇದಿಕೆ ಇಂತಹ ಅದ್ಭುತವಾದ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ವಿದ್ಯಾರ್ಥಿನಿಯರು ಇದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರು ಉದ್ಯೋಗದಲ್ಲಿ ಸೇರಿಕೊಳ್ಳಬೇಕೆಂದು ಹೇಳಿದರು. ಅಲ್ಲದೆ ಈ ಭಾಗದಲ್ಲಿ 371 ಜೆ ತಂದಿದ್ದು ಅಂದು ನಮ್ಮ ಕಾಂಗ್ರೆಸ್ ಸರ್ಕಾರ ಆದುದರಿಂದ ತಾವೆಲ್ಲರೂ ಈ ಭಾಗದಲ್ಲಿ ಜನಿಸಿದ್ದು ಪುಣ್ಯವಂತರು. ಕಲ್ಯಾಣ ಕರ್ನಾಟಕದ 371 (ಜೆ) ಸಂವಿಧಾನ ತಿದ್ದುಪಡಿ ಮೂಲಕ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಸತತ ಪ್ರಯತ್ನ ನಡೆಸುತ್ತಿರುವ ಆಗಿನ ಲೋಕಸಭೆಯ ಕಾಂಗ್ರೆಸ್ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಎನ್.ಧರ್ಮ ಸಿಂಗ್ ಅವರು ಎಂದು ಶ್ಲಾಘಿಸಿದರು. ಕಾಂಗ್ರೆಸ್ ಸರ್ಕಾರದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ 36 ಸಾವಿರ ಹುದ್ದೆ ಭರ್ತಿ ಮಾಡಿದರು. ಆದರೆ ಈ ಬೇಜವಾಬ್ದಾರಿ ಸರ್ಕಾರ ಒಂದೇ ಒಂದು ಹುದ್ದೆ ತುಂಬಲಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಮ್ಮ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದಂತೆ ಈ ಭಾಗದ ಅಭಿವೃದ್ದಿಗೆ 5000 ಕೋಟಿ ರೂ. ನೀಡುತ್ತೇವೆ ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬುತ್ತೇವೆ ಎಂದರು.
ಅದ್ಭುತವಾದ ಕೆಲಸ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಆದುದರಿಂದ ಮುಂದೆ ಬರುವಂತಹ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಮಗೆ ಆಶೀರ್ವಾದ ಮಾಡಿ ಬೆಂಬಲಿಸಬೇಕು ಎಂದರು.
ಯಾಕೆಂದರೆ ಇಂದು ತಮಗೆ ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ 2000 ರೂ, ಪ್ರತಿ ಕುಟುಂಬಕ್ಕೆ ಮಾಸಿಕ 200 ಯುನೀಟ್ ವಿದ್ಯುತ್ ಉಚಿತವಾಗಿ ನೀಡಲಿದೆ. ಅಲ್ಲದೆ ಮಾಸಿಕ ಪ್ರತಿ ವ್ಯಕ್ತಿಗೆ 10 ಕಿಲೋ ಅಕ್ಕಿ ನೀಡಲಿದೆಂದು ಗ್ಯಾರೆಂಟೆ ಕೊಡುತ್ತೇವೆ ಹಾಗೂ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತೆ. ಅದಕ್ಕಾಗಿ ನಾನು ಕೂಡ ಯುವಕರ ಪರವಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪರವಾಗಿ ಧ್ವನಿಯೆತ್ತುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದರು.