ಉಚಿತ ಕನ್ನಡಕ ವಿತರಣೆ

ಬೆಂಗೂರು.ನ೧೦_ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಭವನದಲ್ಲಿ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಜೆಪಿ ಯುವ ಮುಖಂಡ ಅವಿನ್ ಆರಾಧ್ಯ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಅವರು ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿದರು. ಕಾರ್ಯಕ್ರಮದ ಅಂಗವಾಗಿ ದೀಪಾವಳಿ ಹಬ್ಬದ ಪ್ರಯುಕ್ತ ೧೩೦ ಅದರಲ್ಲಿ ೩೫ ಜನರಿಗೆ ಉಚಿತವಾಗಿ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಿ ೬೮ ಜನರಿಗೆ ಉಚಿತವಾಗಿ ಹೆಚ್ಚು ಜನಗಳಿಗೆ ಕನ್ನಡಕ ವಿತರಣೆ ಮಾಡಲಾಯಿತು.
ಸಚಿವ ಕೆ ಗೋಪಾಲಯ್ಯ ಅವರು ಮಾತನಾಡಿ ನೇತ್ರದಾನ ಶಿಬಿರ ಮಾಡಿ ಇಂದು ನಿಮ್ಮೆಲ್ಲರಿಗೂ ಉಚಿತವಾಗಿ ಕನ್ನಡಕ ವಿತರಣೆ ಮಾಡುತ್ತಿರುವುದು ಪುಣ್ಯದ ಕೆಲಸ ವಾಗಿದ್ದು,ಎಲ್ಲರೂ ಇದರ ಪ್ರಯೋಜನ ಪಡೆದು ಉತ್ತಮವಾಗಿ ಜೀವನ ಸಾಗಿಸಬೇಕು. ಮತ್ತು ಮುಂಬರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳ ನ್ನೂ ಕೋರಿದ ಸಚಿವರು ಎಲ್ಲರೂ ಪಟಾಕಿ ಸಿಡಿಸದೆ ದೀಪ ಹಚ್ಚಿ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ನೀಡಿದರು.
ನಂತರ ಮಾತನಾಡಿದ ಅವಿನ್ ಆರಾಧ್ಯ ರವರು ಇಂಥ ಜನಪರ ಕಾರ್ಯಕ್ರಮಗಳನ್ನು ರೂಪಿಸಲು ನಮಗೆ ಪ್ರೋತ್ಸಾಹ ನೀಡುವ ಮೂಲಕ ಬೆನ್ನೆಲುಬು ಆಗಿದ್ದಾರೆ ನಮ್ಮ ಸಚಿವರಾದ ಗೋಪಾಲಣ್ಣ ನವರು, ಹಾಗೆಯೇ ಇನ್ನು ಹೆಚ್ಚು ಹೆಚ್ಚು ಸಮಾಜ ಮುಖಿ ಕೆಲಸಗಳನ್ನು ಮಾಡಲು ಕ್ಷೇತ್ರದ ಬಿಜೆಪಿ ಮುಖಂಡರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲಿಸಿ ಬೆನ್ನು ತಟ್ಟಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಓಗೊಟ್ಟು ಎಲ್ಲರೂ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಬೇಕು ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ಆಗದ ಹಾಗೆ ಮುನ್ನೆಚ್ಚರಿಕೆಯನ್ನ ವಹಿಸಿ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿ ಆಚರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಸ್ ಹರೀಶ್, ವೆಂಕಟೇಶ್, ಸೆನೆಟ್ ರವಿ,ರೈತ ಮೋರ್ಚಾ ಅಧ್ಯಕ್ಷ ರಾದ ಬೋರೆಗೌಡ್ರು, ಆರ್ ಮಂಜುನಾಥ್, ಪ್ರಸನ್ನ ,ರಾಮಪ್ಪ ಕುಮಾರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.