ಉಚಿತ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ

ರಾಯಚೂರು,ಜು.೨೬-
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಡವಾಟಿ ಗ್ರಾಮದಲ್ಲಿ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಂ.ಕೆ. ಭಂಡಾರಿ ಆಸ್ಪತ್ರೆಯ ಸಹಯೋಗದಲ್ಲಿ ಇಂದು ಗ್ರಾಮಸ್ಥರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಿತ್ತು.