ಉಚಿತ ನೇತ್ರ ತಪಾಸಣೆ ಶಿಬಿರ ಸದುಪಯೋಗಪಡಿಸಿಕೊಳ್ಳಿ-ಡಾ.ಸ್ವಾತಿ

ಬ್ಯಾಡಗಿ,ಏ8: ಕಣ್ಣಿನ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಆಯೋಜಿಸಿರುವ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದ ಸದುಪಯೋಗವನ್ನು ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನತೆ ಪಡೆದುಕೊಳ್ಳಬೇಕು ಎಂದು ಡಾ.ಸ್ವಾತಿ ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶಿವಮೊಗ್ಗದ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ, ಬ್ಯಾಡಗಿಯ ಶ್ರೀಜಗದ್ಗುರು ಜಯದೇವ ಮುರುಘರಾಜೇಂದ್ರ ಕಲಾ,ಕ್ರೀಡೆ,ಸಂಸ್ಕೃತಿ ಸೇವಾ ಸಂಸ್ಥೆ, ಭ್ರಷ್ಟಾಚಾರ ವಿರೋಧಿ ಜನಾಂದೋಲನ ನ್ಯಾಸ ಘಟಕ ಹಾಗೂ ಸಾರ್ವಜನಿಕ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನೇತ್ರ ತಪಾಸಣೆ ಮತ್ತು ಚಿಕಿತ್ಸೆ ಹಾಗೂ ರಕ್ತದಾನ ಶಿಬಿರ ಸೇರಿದಂತೆ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಪಟ್ಟಣದ ಸಂಘ-ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದದ್ದು ಎಂದರು.

ಶಿಬಿರದ ಸಂಚಾಲಕ ಮಲ್ಲೇಶಪ್ಪ ಚಿಕ್ಕಣ್ಣನವರ ಮಾತನಾಡಿ, ಈ ಶಿಬಿರದಲ್ಲಿ 266 ಜನರು ಪಾಲ್ಗೊಂಡು ಕಣ್ಣಿನ ತಪಾಸಣೆಗೊಳಗಾಗಿದ್ದು, 166ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಸ ಘಟಕದ ಸಂಚಾಲಕ ವಿ.ಆರ್. ತೋಟದ, ಮಹಿಳಾ ಸಂಚಾಲಕಿ ಫರೀದಾ ನದ್ದಿಮುಲ್ಲಾ, ಎನ್.ಆರ್.ಹಾದಿಮನಿ, ಶಿವನಗೌಡ ಪಾಟೀಲ, ಮಾದೇವಕ್ಕ ಕಾರಿ, ಶಂಕರ ಕಣ್ಣಿನ ಆಸ್ಪತ್ರೆಯ ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡು ಈ ಶಿಬಿರವನ್ನು ಯಶಸ್ವಿಗೊಳಿಸಿದರು.