ತುಮಕೂರು, ಸೆ. ೩೦- ವಿಶ್ವ ರೇಬಿಸ್ ದಿನಾಚರಣೆಯನ್ನು ರೇಬಿಸ್ ಲಸಿಕೆ ಕಂಡು ಹಿಡಿದ ಫ್ರೆಂಚ್ ವಿಜ್ಞಾನಿ ಲೂಯಿಸ್ ಪಾಶ್ಚರ್‌ರವರ ಪುಣ್ಯತಿಥಿ ಸ್ಮರಣಾರ್ಥ ಆಚರಿಸುತ್ತಿದ್ದು, ರೇಬಿಸ್‌ನಂತಹ ಮಾರಣಾಂತಿಕ ಕಾಯಿಲೆಯನ್ನು ತಡೆಗಟ್ಟುವುದರ ಮಹತ್ವದ ಬಗ್ಗೆ ತಿಳಿಸಿ, ಪಶು ಸಖಿಯರು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಇಲಾಖಾ ವತಿಯಿಂದ ಈ ತಿಂಗಳು ಹಮ್ಮಿಕೊಂಡಿರುವ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಪಶು ಪಾಲನಾ ಮತ್ತು ಪಶು ವೈದ್ಯ ಸೇ ಇಲಾಖೆ ಉಪನಿರ್ದೇಶಕ ಡಾ. ಗಿರೀಶ್‌ಬಾಬು ಹೇಳಿದರು.
ಪಶು ಆಸ್ಪತ್ರೆ ಆವರಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ಸಂಘ, ಇನ್ನರ್‌ವ್ಹೀಲ್ ಕ್ಲಬ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕುವ ಹಾಗೂ ಪಶು ಸಖಿಯರಿಗೆ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ವೈ.ಸಿ. ಕಾಂತರಾಜು ಮಾತನಾಡಿ, ರೇಬಿಸ್ ದಿನಾಚರಣೆ ಆಚರಿಸುವುದರ ಉದ್ದೇಶವೇ ಅರಿವು ಮೂಡಿಸುವುದಾಗಿದ್ದು, ಈ ಒಂದು ದಿಕ್ಕಿನಲ್ಲಿ ಇಲಾಖೆ, ಸಾರ್ವಜನಿಕರು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಪಶು ಸಖಿಯರ ಪಾಲ್ಗೊಳ್ಳುವಿಕೆಯ ಅವಶ್ಯಕತೆ ಬಗ್ಗೆ ತಿಳಿಸಿದರು.
ಈ ನಿಟ್ಟಿನಲ್ಲಿ ಬಹಳ ವರ್ಷಗಳಿಂದ ಸಂಘ ಮತ್ತು ಇಲಾಖೆ ಜತೆ ಕೈ ಜೋಡಿಸುತ್ತಿರುವ ಇನ್ನರ್ ವ್ಹೀಲ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ಇನ್ನರ್‌ವ್ಹೀಲ್ ಸಂಸ್ಥೆಯ ಅಧ್ಯಕ್ಷೆ ಪವಿತ್ರಾ ಡಾ. ಶಿವಪ್ರಕಾಶ್ ಮಾತನಾಡಿ, ಈ ರೋಗ ನಿರ್ಮೂಲನೆಗೆ ಅವಶ್ಯವಿರುವ ಲಸಿಕಾ ಕಾರ್ಯಕ್ರಮಕ್ಕೆ ತಮ್ಮ ಸಂಸ್ಥೆಯು ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯಸ್ಥರಾದ ಡಾ. ಪುಟ್ಟಸ್ವಾಮಿ ಎಂ.ಬಿ. ಸ್ವಾಗತಿಸಿದರು. ಡಾ. ಶ್ರೀನಿವಾಸ ಕುಜ ರವರು ಪಶು ಸಖಿಯರಿಗೆ ರೇಬಿಸ್ ರೋಗದ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಮಲ್ಲೇಶಪ್ಪ, ಡಾ. ದಿವಾಕರ್, ಡಾ. ವೆಂಕಟೇಶ್‌ಬಾಬುರೆಡ್ಡಿ, ಇನ್ನರ್‌ವ್ಹೀಲ್ ಸಂಸ್ಥೆ ಕಾರ್ಯದರ್ಶಿ ಪ್ರತಿಭಾ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.