ಉಚಿತ ಲಸಿಕೆಗೆ ರಾಹುಲ್ ಆಗ್ರಹ

ನವದೆಹಲಿ.ಏ೨೬: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮೇ.೧ ರಿಂದ ೧೮ ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ದೇಶದ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಚರ್ಚೆ ಬಹಳ ಆಗಿದೆ. ದೇಶದ ಜನರಿಗೆ ಕೊರೊನಾ ಲಸಿಕೆ ಉಚಿತವಾಗಿ ಸಿಗಬೇಕು. ಭಾರತವನ್ನು ಬಿಜೆಪಿ ಭಾರತವನ್ನು ಬಿಜೆಪಿ ವ್ಯವಸ್ಥೆಯ ಬಲಿಪಶುವನ್ನಾಗಿ ಮಾಡಬೇಡಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇನ್ನು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಗೆ ಸಂಸ್ಥೆ ದರ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ ಒಂದು ಡೋಸ್ ಗೆ ೬೦೦ ರೂ. ಖಾಸಗಿ ಆಸ್ಪತ್ರೆಗೆ ೧,೨೦೦ ರೂ. ದರದಲ್ಲಿ ಪೂರೈಕೆ ಮಾಡುವುದಾಗಿ ಹೇಳಿದೆ.