ಉಚಿತ ಲಸಿಕೆ ಐತಿಹಾಸಿಕ ನಿರ್ಧಾರ

ಕಲಬುರಗಿ,ಜೂ.8:ಕೊರೋನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಕೋರೋನಾ ಎರಡನೇ ಅಲೆಗೆ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿರುವುದರಿಂದ ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ, ಮತ್ತು ಬಡವರು ಯಾರೂ ಹಸಿವಿನಿಂದ ಇರಬಾರದು ಎಂದು ನವೆಂಬರ್ ವರೆಗೆ ಉಚಿತ ರೇಷನ್ ನೀಡುವುದಾಗಿ ಪ್ರಧಾನಿಯವರು ಘೋಷಿಸಿ, ದೇಶದ ಯುವಕರ, ಬಡವರ ನೆರವಿಗೆ ಬಂದಿರುವುದಕ್ಕೆ ಧನ್ಯವಾದಗಳು ಎಂದು ಕಲಬುರಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಶಿವ ಅಷ್ಠಗಿ ತಿಳಿಸಿದ್ದಾರೆ.