ಉಚಿತ ಸಮುದಾಯ ಲಸಿಕೆ ಅಭಿಯಾನಕ್ಕೆ ಚಾಲನೆ

ವಿಜಯಪುರ, ನ.20-ಜಿಲ್ಲೆಯಲ್ಲಿ ದಿ.15/11/2021 ರಿಂದ 20/11/2021 ರ ವರೆಗೆ ವಿಜಯಪುರ ತಾಲೂಕಾ ವ್ಯಾಪ್ತಿಯಲ್ಲಿ ಕಡಿಮೆ ಸಾಧನೆ ಮಾಡಿರುವ ಲಸಿಕಾ ಸ್ಥಳಗಳಲ್ಲಿ ಸಂಚಾರಿ ಲಸಿಕಾ ಕೇಂದ್ರ, ವೋಲ್ವೋ ಗ್ರುಪ್ಸ್ ನಾರಾಯಣ ಹೆಲ್ತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಉಚಿತ ಸಮುದಾಯ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಸಂಚಾರಿ ಲಸಿಕಾ ಕೇಂದ್ರ, ಉಚಿತ ಸಮುದಾಯ ಲಸಿಕೆ ಅಭಿಯಾನಕ್ಕೆ ಇಂದು ಚಾಲನೆ ನೀಡಿ ಅವರು ಮಾತನಾಡಿದರು.
ಅದರಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನ್ನೂರ, ನಾಗಠಾಣ, ತಿಕೋಟಾ, ಜಲನಗರ, ನೌಬಾಗ, ಕನ್ನೂರ ಜಾಲಗೇರಿ, ಸರ್ಕಾರಿ ಪದವಿ ಮಹಾವಿದ್ಯಾಲಯ ಈ ಸ್ಥಳಗಳಲ್ಲಿ ಉಚಿತ ಸಮುದಾಯ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈಗಾಗಲೇ 1ನೇ ಡೋಸ್ 101 ಫಲಾನುಭವಿಗಳಿಗೆ ಲಸಿಕೆ ಹಾಕಲಾಗಿದೆ. 2ನೇ ಡೋಸ್ 584 ಫಲಾನುಭವಿಗಳಿಗೆ ಲಸಿಕೆ ಹಾಕಲಾಗಿದೆ. ದಿ.20/11/2021 ರಂದು ನಗರದ ನೌಬಾಗ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಉಚಿತ ಸಮುದಾಯ ಲಸಿಕೆ ಅಭಿಯಾನ ನಡೆಯಲಿದ್ದು, ಕಾರಣ ಸಾರ್ವಜನಿಕರು ಕೋವಿಡ್-19 ರ ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳಬೇಕು.
ಅದರಂತೆ ಜನರು ಕೋವಿಡ್-19 ರೋಗದಿಂದ ದೂರವಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ರೋಗಮುಕ್ತ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕೆಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.