ಉಜನಿಕೊಪ್ಪ ನೇಮಕ

ಬ್ಯಾಡಗಿ,ನ19: ಭಾರತೀಯ ಜನತಾ ಪಕ್ಷದ ಸಂವಿಧಾನದ ಅನುಗುಣವಾಗಿ ಹಾವೇರಿ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟದ ಸದಸ್ಯರನ್ನಾಗಿ ಪಟ್ಟಣದ ಯುವ ಬಿಜೆಪಿ ಮುಖಂಡ ಪರಶುರಾಮ ಉಜನಿಕೊಪ್ಪ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಪರಶುರಾಮ ಅವರಿಗೆ ನೇಮಕಾತಿ ಆದೇಶ ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ಧರಾಜ ಕಲಕೋಟಿ ಅವರು, ನೂತನ ಸದಸ್ಯರಿಗೆ ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ, ಕಾರ್ಯಕರ್ತರಿಗೆ ಸ್ಫೂರ್ತಿಯಾಗಿ ರಾಜಕೀಯವಾಗಿ, ಸಾಮಾಜಿಕವಾಗಿ ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಸಂಘಟನೆಯಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದ್ದಾರೆ.